ಕಾರ್ಕಳ: ‘ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ. ಆದರೆ, ಇಂದಿನ ಯುವಜನರು ಮೊಬೈಲ್ ಫೋನ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ’ ಎಂದು ಶ್ರೀಮೂಕಾಂಬಿಕಾ ದೇವಸ್ಥಾನ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕೇಶ್ ಶೆಟ್ಟಿ ಹೊಸಮಠ ಹೇಳಿದರು.

ಇಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸಿದರೆ ಜೀವನ ಸಾರ್ಥಕವಾಗುತ್ತದೆ’ ಎಂದರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಸಂಸ್ಥೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳೇ ಮುನ್ನಡೆಸುವ ವ್ಯವಹಾರ ಮೇಳವನ್ನು ಉದ್ಘಾಟಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲೆ ಸಾಹಿತ್ಯ, ಉಷಾ ರಾವ್ ಯು., ವಾಣಿ ಕೆ., ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಡೀನ್ ಸ್ಟೂಡೆಂಟ್ ಅಫೈರ್ ಶಕುಂತಳಾ ಸುವರ್ಣ, ವ್ಯವಹಾರ ಅಧ್ಯಯನದ ಉಪನ್ಯಾಸಕ ಶೈಲೇಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯಾ ಹೆಗ್ಡೆ, ಸಂಸ್ಥೆಯ ಹಿತೈಷಿ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್ ಇದ್ದರು.

ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯಾ ಹೆಗ್ಡೆ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಜ್ವಲ್ ಕುಲಾಲ್ ಪಥಸಂಚಲನ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.