ಉಡುಪಿ: ಉಡುಪಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರೋಡ್ಶೋ ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಿದರು. ಶ್ರೀಕೃಷ್ಣ, ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಮಾಡಿದರು.

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಪ್ರಧಾನಿ ಅವರನ್ನು ಪೂರ್ಣಕುಂಭಗಳೊಂದಿಗೆ ಬರಮಾಡಿಕೊಳ್ಳಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು, ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಪಠಿಸಲಿದ್ದಾರೆ.

ಶ್ಲೋಕಗಳ ಪಾರಾಯಣದ ಬಳಿಕ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಮೋದಿ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಮೋದಿಯವರು ಕೋಟಿ ಗೀತಾ ಲೇಖನ ಯಜ್ಷದ ದೀಕ್ಷೆಯನ್ನೂ ಪಡೆಯಲಿದ್ದಾರೆ.

ಉಡುಪಿಯ ಆದಿ ಉಡುಪಿ ಹೆಲಿಪ್ಯಾಡ್ನಲ್ಲಿ ಮೋದಿ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸ್ಥಳೀಯ ಅಧಿಕಾರಿಗಳು ಬರಮಾಡಿಕೊಂಡರು.
.ಉಡುಪಿ ಕೃಷ್ಣಮಠ ಪರ್ಯಾಯ ; ವಿಶ್ವವಲ್ಲಭ ಶ್ರೀ ಪೀಠಾರೋಹಣ.ಕೃಷ್ಣಮಠ: ಸಂಭ್ರಮದ ವಿಟ್ಲಪಿಂಡಿ ಉತ್ಸವ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.