ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಸಭಾ ಆಡಳಿತದ ಉಚ್ಚಿಲ ಮಹಾಲಕ್ಷ್ಮೀ ದೇವಳದ ವತಿಯಿಂದ ಮಹಾಜನ ಸಂಘದ ಆಡಳಿತ ಪದಾಧಿಕಾರಿಗಳು ಭಾನುವಾರ ವಿವಿಧ ಮೊಗವೀರ ಮಹಾಸಭೆಗಳಿಗೆ ಭೇಟಿ ನೀಡಿದರು.

ಹೆಜಮಾಡಿಯ ಗುಂಡಿ ಮೊಗವೀರ ಮಹಾಸಭಾದ ವಾರ್ಷಿಕ ಮಹಾಸಭೆಯಲ್ಲಿ ಮಹಾಸಭಾ ಅಧ್ಯಕ್ಷ ಜಯ ಸಿ. ಕೋಟ್ಯನ್ ಬೆಳ್ಳಂಪಳ್ಳಿ ಮಾತನಾಡಿ, ಉಚ್ಚಿಲ ಕ್ಷೇತ್ರಕ್ಕೆ ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಉಚ್ಚಿಲ ದಸರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಜತೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ನಿರಂತರ ಸೇವೆ ನಡೆಯುತ್ತಾ ಬಂದಿದೆ. ಈ ಬಾರಿ ಹಲವು ಶಾಶ್ವತ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಂಘ ನಿರ್ಧರಿಸಿದ್ದು, ಗ್ರಾಮ ಸಭೆಗಳು ಸಹಕಾರ ನೀಡಬೇಕು ಎಂದರು.

ಗುಂಡಿ ಮೊಗವೀರ ಮಹಾಸಭಾದ ಅಧ್ಯಕ್ಷ ದಿವಾಕರ ಹೆಜ್ಮಾಡಿ ಪ್ರತಿಕ್ರಿಯಿಸಿ, ಮಹಾಜನ ಸಂಘದ ಮನವಿಯಂತೆ ನಮ್ಮ ಗ್ರಾಮ ಸಭಾ ವತಿಯಿಂದ ಸಹಕಾರ ನೀಡಲು ಬದ್ಧರಿದ್ದೇವೆ ಎಂದರು.

ಜಯ ಸಿ. ಕೋಟ್ಯಾನ್ ಅವರು ದಿವಾಕರ ಹೆಜ್ಮಾಡಿ ಅವರಿಗೆ ಮಹಾಜನ ಸಂಘದ ಮನವಿಯನ್ನು ಹಸ್ತಾಂತರಿಸಿದರು. ಸಂಘದ ಖಜಾಂಚಿ ರತ್ನಾಕರ ಸಾಲ್ಯಾನ್, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಸಂಘದ ಸಮಿತಿ ಸದಸ್ಯರಾದ ಯಾದವ ವಿ.ಕೆ, ಕಿರಣ್ ಕುಮಾರ್ ಉದ್ಯಾವರ, ದಿನೇಶ್ ಎರ್ಮಾಳ್, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ, ಗುಂಡಿ ಮೊಗವೀರ ಮಹಾಸಭಾ ಗುರಿಕಾರ ಲೋಕನಾಥ ಗುರಿಕಾರ, ಪ್ರಧಾನ ಕಾರ್ಯದರ್ಶಿ ದಿನೇಶ್ ಸುವರ್ಣ, ಮಹಿಳಾ ವಿಭಾಗದ ಅಧ್ಯಕ್ಷೆ ಶುಭಾ ದಿನೇಶ್, ಜತೆ ಕಾರ್ಯದರ್ಶಿ ಯತೀಶ್ ಕೋಟ್ಯಾನ್, ಖಜಾಂಚಿ ಮೋಹಿತ್ ಸಾಲ್ಯಾನ್ ಭಾಗವಹಿಸಿದ್ದರು.

ಭಾನುವಾರ 10ಕ್ಕೂ ಅಧಿಕ ಗ್ರಾಮಸಭೆಗಳಿಗೆ ಮಹಾಜನ ಸಂಘದ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಮಹಾಜನ ಸಂಘ ಅಧೀನದಲ್ಲಿ 169 ಗ್ರಾಮ ಸಭೆಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.