ಕಾರ್ಕಳ ತಾಲ್ಲೂಕಿನಲ್ಲಿ ಮಂಗನ ಶವ ಪತ್ತೆ

7
ಮಣಿಪಾಲದ ಕೆಎಂಸಿಯಲ್ಲಿ 59 ಮಂದಿ ಶಂಕಿತ ಮಂಗನಕಾಯಿಲೆ ರೋಗಿಗಳಿಗೆ ಚಿಕಿತ್ಸೆ

ಕಾರ್ಕಳ ತಾಲ್ಲೂಕಿನಲ್ಲಿ ಮಂಗನ ಶವ ಪತ್ತೆ

Published:
Updated:

ಉಡುಪಿ: ಕಾರ್ಕಳ ತಾಲ್ಲೂಕಿನ ಹಿರ್ಗಾಣ ಗ್ರಾಮದಲ್ಲಿ ಗುರುವಾರ ಮತ್ತೊಂದು ಮಂಗನ ಶವ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ ಹೆಚ್ಚಾಗಿದೆ.

ಎರಡು ದಿನಗಳ ಹಿಂದೆ ಕುಂದಾಪುರ ತಾಲ್ಲೂಕಿನ ಸಿದ್ದಾಪುರ, ಹೊಸಂಗಡಿ ಹಾಗೂ ಶೀರೂರಿನಲ್ಲಿ 4 ಮಂಗಗಳ ಶವ ಪತ್ತೆಯಾಗಿತ್ತು. ದಿನೇದಿನೇ ಮಂಗಗಳ ಸಾವು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಈ ಸಂಬಂಧ ಪ್ರಜಾವಾಣಿ ಜತೆ ಮಾತನಾಡಿದ ಡಿಎಚ್‌ಒ ಡಾ.ರೋಹಿಣಿ, ‘ಸತ್ತ ಮಂಗಗಳ ಶವಪರೀಕ್ಷೆ ನಡೆಸಲಾಗಿದ್ದು, ದೇಹದ ಭಾಗಗಳನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೂರು ದಿನಗಳ ಬಳಿಕ ವರದಿ ಕೈಸೇರಲಿದ್ದು, ಮಂಗಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದರು.

ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಮಂಗನಕಾಯಿಲೆ ಹರಡುವ ಉಣ್ಣೆಗಳ ನಿಯಂತ್ರಣಕ್ಕೆ ಪಶ್ಚಿಮಘಟ್ಟಗಳ ತಪ್ಪಲಿನ ಗ್ರಾಮಗಳಲ್ಲಿ ರಾಸಾಯನಿಕ ಸಿಂಪರಣೆ ಮಾಡಲಾಗುತ್ತಿದೆ ಎಂದು ಡಿಎಚ್‌ಒ ತಿಳಿಸಿದರು.

ಕಾರ್ಕಳ ಕುಂದಾಪುರ ವ್ಯಾಪ್ತಿಯಲ್ಲಿ ಶಂಕಿತ ಮಂಗನಕಾಯಿಲೆ ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಹಾಗೂ ಚಿಕಿತ್ಸೆ ಕೊಡಿಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾರಲ್ಲೂ ಮಂಗನಕಾಯಿಲೆ ಸೋಂಕು ಪತ್ತೆಯಾಗಿಲ್ಲ ಎಂದು ತಿಳಿಸಿದರು.

21 ಮಂದಿಗೆ ಮಂಗನಕಾಯಿಲೆ ದೃಢ

ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ 59 ರೋಗಿಗಳ ಪೈಕಿ 21 ಮಂದಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. 34 ರೋಗಿಗಳಲ್ಲಿ ಸೋಂಕು ಪತ್ತೆಯಾಗಿಲ್ಲ. 33 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ 26 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದರು.

ಆಸ್ಪತ್ರೆಯಲ್ಲಿ ಇದುವರೆಗೂ ಮಂಗನಕಾಯಿಲೆಯಿಂದ ಯಾರೂ ಮೃತಪಟ್ಟಿಲ್ಲ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !