ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಜಮಾಡಿಯಲ್ಲಿ ಮಂಗನ ಶವ ಪತ್ತೆ

Last Updated 18 ಜನವರಿ 2019, 15:12 IST
ಅಕ್ಷರ ಗಾತ್ರ

ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿಯಲ್ಲಿ ಶುಕ್ರವಾರ ಮಂಗನ ಶವವೊಂದು ಪತ್ತೆಯಾಗಿದೆ. ಆದರೆ, ಮೇಲ್ನೋಟಕ್ಕೆ ವಿದ್ಯುತ್‌ ಸ್ಪರ್ಶದಿಂದ ಮಂಗ ಸತ್ತಿರುವ ಶಂಕೆಯಿದ್ದು, ಸಾವಿನ ಕಾರಣ ತಿಳಿಯಲು ಶವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಬುಧವಾರ ಕುಂಕಂದೂರು, ಗುರುವಾರ ಅಲೆವೂರಿನಲ್ಲಿ ಪತ್ತೆಯಾಗಿದ್ದ ಮಂಗನ ಶವಗಳಲ್ಲಿ ಸೋಂಕು ಇಲ್ಲ ಎಂಬ ವಿಚಾರ ಎಂಸಿವಿಆರ್ ಪರೀಕ್ಷೆಯಿಂದ ದೃಢಪಟ್ಟಿದೆ. ಇಲ್ಲಿಯವರೆಗೂ 10 ಮಂಗಗಳ ಪರೀಕ್ಷಾ ವರದಿ ಬಂದಿದ್ದು, 8 ಮಂಗಗಳ ಶವಗಳಲ್ಲಿ ಸೋಂಕು ಪತ್ತೆಯಾಗಿದ್ದು, 2ರಲ್ಲಿ ಮಾತ್ರ ಪತ್ತೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲದಲ್ಲಿ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಇದುವರೆಗೂ 98 ಮಂದಿ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದು, 51 ಮಂದಿಯಲ್ಲಿ ಸೋಂಕು ಪತ್ತೆಯಾಗಿಲ್ಲ. ಅವರೆಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದುವರೆಗೂ ಆಸ್ಪತ್ರೆಯಲ್ಲಿ ಸೋಂಕು ಬಾಧಿತರು ಮೃತಪಟ್ಟಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT