ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಲ: ಅಪಘಾತಗಳಾಗದಂತೆ ಎಚ್ಚರಿಕೆ ವಹಿಸಿ

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ
Last Updated 7 ಜೂನ್ 2020, 15:17 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ ವ್ಯಾಪ್ತಿಯಲ್ಲಿ ಮಳೆಗಾಲದ ಸಂದರ್ಭ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು.

ಹೆದ್ದಾರಿ ಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು. ಅಗತ್ಯವಿರುವಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಹೆದ್ದಾರಿಯಲ್ಲಿ ಗುಂಡಿಗಳಿದ್ದರೆ ಮುಚ್ಚಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 166ಎ ವ್ಯಾಪ್ತಿಯ ಇಂದ್ರಾಳಿ ರೈಲ್ವೆ ಸೇತುವೆ ಬಳಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ. ಹೆದ್ದಾರಿ ಸಂಪರ್ಕಿಸುವ ನಗರಸಭೆಯ ರಸ್ತೆಗಳ ಬಳಿ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತಗಳಾಗುವುದನ್ನು ತಪ್ಪಿಸಬೇಕು. ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯ ವಿರುದ್ದ ದಿಕ್ಕಿನಲ್ಲಿ ವಾಹನಗಳನ್ನು ಓಡಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂತೆಕಟ್ಟೆಯ ಮಾರುಕಟ್ಟೆಯನ್ನು ವಾರದೊಳಗೆ ಸ್ಥಳಾಂತರಿಸಬೇಕು ಎಂದು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಾಗೂ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಎಎಸ್‌ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT