ಗುರುವಾರ , ಆಗಸ್ಟ್ 18, 2022
25 °C

ಉಡುಪಿ | ಮಾಸಪತ್ರಿಕೆ ಬಿಡುಗಡೆ: ಪ್ರತಿಭಾ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ಅಮೃತಭಾರತಿ ವಿದ್ಯಾಲಯದ 10ನೇ ವರ್ಷದ ಅಮೃತವಾಣಿ ಮಾಸ ಪತ್ರಿಕೆ ಬಿಡುಗಡೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ವಿಷಯವಾರು ಪೂರ್ಣಾಂಕ ಗಳಿಸಿದ 35 ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಗುರುವಾರ ನಡೆಯಿತು.

ಅಮೃತಭಾರತಿ ವಿದ್ಯಾಲಯದ ಟ್ರಸ್ಟ್ ಅಧ್ಯಕ್ಷ ಶೈಲೇಶ್ ಕಿಣಿ ನೇತೃತ್ವ ವಹಿಸಿದ್ದರು. ಟ್ರಸ್ಟ್ ಸದಸ್ಯರಾದ ಗುರುದಾಸ ಶೆಣೈ, ಬಾಲಕೃಷ್ಣ ಮಲ್ಯ, ರಾಮಕೃಷ್ಣ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ, ಮಾಸ ಪತ್ರಿಕಾ ಸಂಪಾದಕ ಮಹೇಶ್ ಹೈಕಾಡಿ ಉಪಸ್ಥಿತರಿದ್ದರು. ವಿದ್ವಾನ್ ವೇದವ್ಯಾಸ ತಂತ್ರಿ ಸ್ವಾಗತಿಸಿ, ಸುನಿಲ್ ನಾಯಕ್ ವಂದಿಸಿ ಸಾವಿತ್ರಿ ಕಿಣಿ ನಿರೂಪಿಸಿದರು.

ವ್ಯಕ್ತಿತ್ವ ವಿಕಸನ ಶಿಬಿರ: ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ಕ್ಯಾ. ಗಣೇಶ್ ಕಾರ್ಣಿಕ್ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಸಿಕೊಟ್ಟರು. ಡಾ. ಜಯಕೃಷ್ಣ ನಾಯಕ್ ವೃತ್ತಿಪರತೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಟ್ರಸ್ಟ್‌ ಕಾರ್ಯದರ್ಶಿ ಗುರುದಾಸ್ ಶೆಣೈ, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಟ್ರಸ್ಟ್‌ ಸದಸ್ಯ ಬಾಲಕೃಷ್ಣ ಮಲ್ಯ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.