ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ಜಿಲ್ಲೆಯಾದ್ಯಂತ ಸಂಭ್ರಮದ ಮೊಂತಿ ಫೆಸ್ಟ್

Published : 9 ಸೆಪ್ಟೆಂಬರ್ 2024, 5:35 IST
Last Updated : 9 ಸೆಪ್ಟೆಂಬರ್ 2024, 5:35 IST
ಫಾಲೋ ಮಾಡಿ
Comments

ಉಡುಪಿ: ಕನ್ಯಾಮರಿಯಮ್ಮ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಿದರು.

ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆಶೀರ್ವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚ್‌ನ ಪ್ರಧಾನ ಧರ್ಮಗುರು  ಚಾರ್ಲ್ಸ್ ಮಿನೇಜಸ್ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.

ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಪ್ರಧಾನ ಧರ್ಮಗುರು ಡೆನಿಸ್ ಡೆಸಾ,  ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರು ಫರ್ಡಿನಾಂಡ್ ಗೊನ್ಸಾಲ್ವಿಸ್ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು.

ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ವಿತರಿಸಲಾಯಿತು. ಇಗರ್ಜಿಯಿಂದ ತಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಬಳಿಕ ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು.

ಹಬ್ಬಕ್ಕೆ ಮುಂಚಿತವಾಗಿ ಎಲ್ಲಾ ಚರ್ಚ್‌ಗಳಲ್ಲಿ 9 ದಿನಗಳ ಕಾಲ ವಿಶೇಷ ಪ್ರಾರ್ಥನೆ (ನವೇನಾ) ನಡೆಯುತ್ತದೆ. 9 ನೇ ದಿನವನ್ನು ಮೊಂತಿ ಹಬ್ಬವಾಗಿ ಆಚರಣೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT