ಉಡುಪಿ: ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂಆರ್‌ಐ ಸೇವೆ ಗುತ್ತಿಗೆ ಪಡೆದ ಕಂಪನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇರುವ ಕಾರಣ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಅಗತ್ಯವಿರುವ ರೋಗಿಗಳಿಗೆ ಮಾತ್ರ ಎಂಆರ್‌ಐ ಸೇವೆ ನೀಡುತ್ತಿದ್ದು, ಇತರ ರೋಗಿಗಳಿಗೆ ವೈದ್ಯರ ಸಲಹೆಯ ಮೇರೆಗೂ ಸ್ಕ್ಯಾನಿಂಗ್ ಸೇವೆ ನೀಡುತ್ತಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಗೆ 6 ತಿಂಗಳಿನಿಂದ ಬಿಲ್ ಪಾವತಿ ಬಾಕಿ ಇರುವ ಬಗ್ಗೆ ಸಂಸ್ಥೆ ಆರೋಪಿಸುತ್ತಿದ್ದು, ಸರ್ಕಾರ ಆರೋಗ್ಯ ಸಂಬಂಧಿತ ಸೇವೆಗಳ ವಿಚಾರದಲ್ಲಿ ಎಂದಿಗೂ ರಾಜಿ ಮಾಡದೆ, ಜನಸಾಮಾನ್ಯರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಖಾಸಗಿ ಸಂಸ್ಥೆಗೆ ಬಾಕಿ ಮೊತ್ತ ಪಾವತಿ ಮಾಡಬೇಕು ಎಂದೂ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.