ಹೆಬ್ರಿ: ಮಳೆಗಾಲದಲ್ಲಿ ಹರಡುವ ಸಾಮಾನ್ಯ ಕಾಯಿಲೆಗಳಲ್ಲಿ ಹೆಚ್ಚಿನವು ಸೊಳ್ಳೆ ಕಡಿತದಿಂದ, ಕಲುಷಿತ ನೀರಿನಿಂದ ಬರುವಂಥದ್ದು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನಿಗಾ ವಹಿಸಿದರೆ ಸೊಳ್ಳೆ ಉತ್ಪತ್ತಿ ತಡೆಯಬಹುದು ಎಂದು ಮುದ್ರಾಡಿ ಸಮುದಾಯ ಆರೋಗ್ಯ ಅಧಿಕಾರಿ ಅನುಷಾ ನಾಯಕ್ ತಿಳಿಸಿದರು.

ಅವರು ಶನಿವಾರ ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಆರೋಗ್ಯ ಸಂಘದ ಆಶ್ರಯದಲ್ಲಿ ನಡೆದ ಸಾಂಕ್ರಾಮಿಕ ರೋಗಗಳ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಜ್ವರ, ಶೀತಕ್ಕೆ ಮನೆಯಲ್ಲೇ ಔಷಧಿ ತಯಾರು ಮಾಡಿ ಸೇವಿಸುವ ಬದಲು, ಆಸ್ಪತ್ರೆಗೆ ಭೇಟಿ ಕೊಡುವುದು ಉತ್ತಮ. ಕುದಿಸಿ ಆರಿಸಿದ ನೀರನ್ನೇ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು. ಮಕ್ಕಳಿಗೆ ಕೈ ತೊಳೆಯುವ ಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಂಸ್ಥೆಯ ಮುಖ್ಯಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆ ಸರಿತಾ, ಆರೋಗ್ಯ ಸಂಘದ ಕಾರ್ಯದರ್ಶಿ ಸಮೀಕ್ಷಾ ಭಾಗವಹಿಸಿದ್ದರು. ಆರೋಗ್ಯ ಸಂಘದ ಮಾರ್ಗದರ್ಶಿ ಶಿಕ್ಷಕಿ ಶ್ಯಾಮಲಾ ಕೊಠಾರಿ ನಿರೂಪಿಸಿದರು. ಶಿಕ್ಷಕರಾದ ಮಹೇಶ ನಾಯ್ಕ ಕೆ. ವಂದಿಸಿದರು. ಆನಂದ, ರಘುಪತಿ ಹೆಬ್ಬಾರ್, ಚಂದ್ರಕಾಂತಿ ಹೆಗ್ಡೆ, ಮಹೇಶ್ ಎಂ. ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.