ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ 25ರಂದು

Last Updated 24 ಮಾರ್ಚ್ 2023, 12:24 IST
ಅಕ್ಷರ ಗಾತ್ರ

ಉಡುಪಿ: ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾರ್ಚ್ 25ರಂದು ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.

ಈ ವರ್ಷದ ಪ್ರಶಸ್ತಿಯನ್ನು ಲೇಖಕಿ ಬಿ.ಎಂ.ರೋಹಿಣಿ ಅವರಿಗೆ ಪ್ರದಾನ ಮಾಡಲಾಗುವುದು. ಡಾ.ನಾರಾಯಣ ಸಭಾಹಿತ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಅಧ್ಯಕ್ಷರಾದ ಡಾ.ಬಿ.ಎ.ವಿವೇಕ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ಲೇಖಕಿ ಬಿ.ಶಶಿಲೇಖಾ ಅಭಿನಂದನಾ ಭಾಷಣ ಮಾಡಲಿದ್ದಾರೆ. ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಮನೋರಮ ಎಂ.ಭಟ್ ಹಾಗೂ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಉಪಸ್ಥಿತರಿರಲಿದ್ದಾರೆ.

ಇದೇ ಸಂದರ್ಭ ಮುಳಿಯ ಗೋಪಾಲಕೃಷ್ಣ ಭಟ್ಟರು ಬರೆದ ‘ದೊಡ್ಡವರ ಸಣ್ಣಕಥೆಗಳು’ ಕೃತಿ ಬಿಡುಗಡೆಯಾಗಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT