ಶುಕ್ರವಾರ, ಫೆಬ್ರವರಿ 28, 2020
19 °C

ಕೊಲೆ ಪ್ರಕರಣ: ಆರೋಪಿಗಳು 17ರವರೆಗೆ ಪೊಲೀಸರ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮುಂಬೈ ಮೂಲದ ಬಾರ್‌ ಉದ್ಯಮಿ ವಶಿಷ್ಟ ಸತ್ಯನಾರಾಯಣ ಯಾದವ್ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬುಧವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಆರೋಪಿಗಳಾದ ಸುಮಿತ್ ಮಿಶ್ರಾ, ಅಬ್ದುಲ್ ಶುಕೂರ್, ಅವಿನಾಶ್ ಕರ್ಕೆರಾ, ಮೊಹಮ್ಮದ್ ಶರೀಪ್‌ನನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡಬೇಕು ಎಂಬ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಫೆ.17ರವರೆಗೂ ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದರು.

ಉದ್ಯಮಿ ಕೊಲೆಗೆ ಕಾರಣ ಹಾಗೂ ಕೈವಾಡದ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಭಾನುವಾರ ರಾತ್ರಿ ಆರೋಪಿಗಳು ವಶಿಷ್ಟರನ್ನು ಕೊಲೆಮಾಡಿ ಶವವನ್ನು ಹಿರಿಯಡ್ಕದ ಬೆಳ್ಳಂಪಳ್ಳಿಯ ರಸ್ತೆ ಬದಿಯ ಪೊದೆಗೆ ಎಸೆದಿದ್ದರು. ಮಂಗಳವಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು