ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಕಾನೂನು ಕ್ರಮಕ್ಕೆ ಮನವಿ

Published 28 ಡಿಸೆಂಬರ್ 2023, 7:38 IST
Last Updated 28 ಡಿಸೆಂಬರ್ 2023, 7:38 IST
ಅಕ್ಷರ ಗಾತ್ರ

ಉಡುಪಿ: ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹಾಗೂ ಮಹಿಳಾ ವಿರೋಧಿ ಹೇಳಿಕೆ ನೀಡಿ ಧರ್ಮಗಳ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟದ ನಿಯೋಗವು ಬುಧವಾರ ಎಸ್‌ಪಿ ಡಾ.ಕೆ.ಅರುಣ್ ಅವರಿಗೆ ಮನವಿ ಸಲ್ಲಿಸಿತು.

ಶ್ರೀರಂಗಪಟ್ಟಣದಲ್ಲಿ ನಡೆದ ಹನುಮಮಾಲೆ ಸಂಕೀರ್ತನಾ ಯಾತ್ರೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಂ ಸಮುದಾಯದ ಮಹಿಳೆಯರ ವಿರುದ್ಧ ಕೀಳು ಭಾಷೆ ಉಪಯೋಗಿಸಿ ನಿಂದಿಸಿದ್ದಾರೆ. ಧರ್ಮಗಳ ಮಧ್ಯೆ ದ್ವೇಷ ಹರಡುವ ಕೆಲಸ ಮಾಡಿದ್ದಾರೆ. ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಅನುಗುಣವಾಗಿ ವಿದ್ಯಾರ್ಥಿನಿಯರು ಧರಿಸುವ ಶಿರವಸ್ತ್ರದ ಕುರಿತು ಆಧಾರ ರಹಿತವಾಗಿ ಮಾನ ಹಾನಿಕಾರ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡುತ್ತಾ ಬಂದಿರುವ ಕಲ್ಲಡ್ಕ ಭಟ್ ಕಳೆದ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ. ಕಲ್ಲಡ್ಕ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಒಕ್ಕೂಟ ಮನವಿಯಲ್ಲಿ ಆಗ್ರಹಿಸಿದೆ.

ನಿಯೋಗದಲ್ಲಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಅಬೂಬಕ್ಕರ್ ನೇಜಾರು, ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ, ಜಿಲ್ಲಾ ಉಪಾಧ್ಯಕ್ಷ ಸಲಾವುದ್ದೀನ್, ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ.ಇರ್ಷಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT