ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ವಿಶ್ವವಿದ್ಯಾಲಯ ಮಟ್ಟದ ಕೊಕ್ಕೊ ಟೂರ್ನಿ: ಮೈಸೂರು ವಿವಿ ಚಾಂಪಿಯನ್‌

ದಕ್ಷಿಣ ವಲಯ
Last Updated 19 ಅಕ್ಟೋಬರ್ 2018, 14:46 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿನ ಟೆನಿಸ್‌ ಒಳಾಂಗಣ ಕ್ರೀಡಾಂಗಣದಲ್ಲಿ ಮುಕ್ತಾಯವಾದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಟ್ಟದ ಕೊಕ್ಕೊ ಟೂರ್ನಿಯಲ್ಲಿ ಮೈಸೂರು ವಿಶ್ವವಿದ್ಯಾಲಯ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ನಡೆದ ಪೈನಲ್‌ ಹಣಾಹಣಿಯಲ್ಲಿ ಮೈಸೂರು ವಿವಿ ತಂಡ 10–11 ಪಾಯಿಂಟ್ಸ್‌ಗಳಿಂದ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಮೈಸೂರು ವಿವಿ ತಂಡದ ಆಟಗಾರ್ತಿ ವೀಣಾ ಅತ್ಯುತ್ತಮ ಆಲ್‌ ರೌಂಡರ್ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.

ಪಂದ್ಯದ ಮೊಲದಾರ್ಧದಲ್ಲಿ ಉಭಯ ತಂಡಗಳು 7–7 ಪಾಯಿಂಟ್ಸ್‌ಗಳ ಸಮಬಲ ಸಾಧಿಸಿದ್ದವು. ಅಂತಿಮ ಸುತ್ತಿನಲ್ಲಿ ಮೈಸೂರು ವಿವಿ ಪ್ರಾಬಲ್ಯ ಮೆರೆಯಿತು.

ಕೇರಳದ ಕ್ಯಾಲಿಕಟ್ ವಿವಿ ಟೂರ್ನಿಯಲ್ಲಿ ಮೂರನೇ ಸ್ಥಾನ ಪಡೆದರೆ, ಕೇರಳ ವಿವಿ ನಾಲ್ಕನೇ ಸ್ಥಾನ ಪಡೆದುಕೊಂಡಿತು. ಕ್ಯಾಲಿಕಟ್ ವಿವಿಯ ಎಸ್‌.ವರ್ಷ ಉತ್ತಮ ಡಾಡ್ಜರ್ ಪ್ರಶಸ್ತಿ ಪಡೆದುಕೊಂಡರೆ, ಮಂಗಳೂರು ವಿವಿಯ ಎಸ್‌.ಸವೀನ ಉತ್ತಮ ಚೇಸರ್, ಮೈಸೂರು ವಿವಿಯ ಆಟಗಾರ್ತಿ ವೀಣಾ ಉತ್ತಮ ಆಲ್‌ ರೌಂಡರ್ ಪ್ರಶಸ್ತಿಗೆ ಪಾತ್ರರಾದರು.

ಅ.15ರಿಂದ ಟೂರ್ನಿ ನಡೆಯುತ್ತಿತ್ತು. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಸೇರಿದಂತೆ ದಕ್ಷಿಣ ವಲಯದ ರಾಜ್ಯಗಳ ವಿಶ್ವವಿದ್ಯಾಲಯಗಳ ತಂಡಗಳು ಭಾಗವಹಿಸಿದ್ದವು. ಕಳೆದ ಬಾರಿಯೂ ಮೈಸೂರು ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಬಹುಮಾನ ವಿತರಿಸಲಾಯಿತು. ಮಂಗಳೂರು ವಿವಿ ಪ್ರಭಾರ ಕುಲಪತಿ ಕಿಶೋರ್ ಕುಮಾರ್, ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ಸಂಚಲನ ಟ್ರಸ್ಟ್ ಅಧ್ಯಕ್ಷ ಪ್ರೇಂಪ್ರಕಾಶ್ ಶೆಟ್ಟಿ, ಕಾಲೇಜು ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಕಾಲೇಜಿನ ಜಂಟಿ ನಿರ್ದೇಶಕ ಮಹೇಶ್‌ ರಾವ್ ಅವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT