ಹೆಬ್ರಿ: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ ಪಂಚಗ್ಯಾರಂಟಿ ಯೋಜನೆಯನ್ನು ಅನುಷ್ಠನಗೊಳಿಸಿ ನುಡಿದಂತೆ ನಡೆದಿದೆ. ಕಾರ್ಕಳ ಕ್ಷೇತ್ರದ ಬಡವರ ಕಲ್ಯಾಣಕ್ಕೆ 400 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಯ ಮೂಲಕ ವಿನಿಯೋಗಿಸಿದೆ, ಜನ ಹಸಿದ ಹೊಟ್ಟೆಯಲ್ಲಿ ಬದುಕಬಾರದು ಎಂಬುದು ಕಾಂಗ್ರೆಸ್ ಉದ್ದೇಶ ಎಂದು ಗ್ಯಾರಂಟಿ ಯೋಜನೆಯ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ವತಿಯಿಂದ ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಗ್ಯಾರಂಟಿ ಅದಾಲತ್ನಲ್ಲಿ ಮಾತನಾಡಿದರು.

ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಂಕರ ಸೇರಿಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಅಧಿಕಾರಿಗಳು ಕೈಜೋಡಿಸಿದಾಗ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತದೆ ಎಂದರು.

ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹೆಬ್ರಿ ತಾಲ್ಲೂಕು ಪಂಚಾಯಿತಿ ಇಒ ಪ್ರಶಾಂತ್ ರಾವ್ ತಾಂತ್ರಿಕ ಸಮಸ್ಯೆಯ ಹೊರತು ಹೆಬ್ರಿ ತಾಲ್ಲೂಕಿನಲ್ಲಿ ಎಲ್ಲರಿಗೂ ಯೋಜನೆಯ ಪ್ರಯೋಜನ ತಲುಪುತ್ತಿದೆ ಎಂದು ತಿಳಿಸಿದರು.

ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯ ಪ್ರವೀಣ್ ಸೂಡ, ಮೆಸ್ಕಾಂ ಹೆಬ್ರಿಯ ಕರ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರತಿ ಶೆಟ್ಟಿ, ಆಹಾರ ಇಲಾಖೆ ನಿರೀಕ್ಷಕ ಗುರುಪ್ರಸಾದ್, ಜಿಲ್ಲಾ ಉದ್ಯೋಗ ಇಲಾಖೆಯ ಪೃಥ್ವಿರಾಜ್ ಮಾತನಾಡಿದರು. ಹೆಬ್ರಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ದಿನೇಶ್, ನಾಡ್ಪಾಲು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹೆಬ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ, ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರಾದ ಪ್ರವೀಣ್ ಸೂಡ, ಜಗದೀಶ ಹೇರಳೆ, ಶಶಿಕಲಾ ಆರ್ಪಿ, ವಸಂತ್, ರಾಜು ಪೂಜಾರಿ ಇದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೀತಲ್ ನಿರೂಪಿಸಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-28-456461399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.