ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಡೂರು ಗ್ರಾವಿಟಿ ಇಂಗ್ಲಿಷ್ ಮೀಡಿಯಂ ಶಾಲೆ: ಕಟ್ಟಡ ಉದ್ಘಾಟನೆ ನಾಳೆ

Published 5 ಜನವರಿ 2024, 13:26 IST
Last Updated 5 ಜನವರಿ 2024, 13:26 IST
ಅಕ್ಷರ ಗಾತ್ರ

ಬ್ರಹ್ಮಾವರ: ನಡೂರು ಮಂದಾರ್ತಿಯ ರತ್ನಶೀಲ ಎಜುಕೇಶನ್ ಟ್ರಸ್ಟ್ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾವಿಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಕಟ್ಟಡವನ್ನು ಜ. 6ರಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನಿಟ್ಟೆ ಸಂತೋಷ ಹೆಗ್ಡೆ ಉದ್ಘಾಟಿಸುವರು ಎಂದು ರತ್ನಶೀಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎಚ್.ಮನೋಹರ ಹೆಗ್ಡೆ ಹೇಳಿದರು.

ಪತ್ರಿಕಾಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4.30ಕ್ಕೆ ನಡೆಯುವ ಸಮಾರೋಪದಲ್ಲಿ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸುವರು.

ಬೆಂಗಳೂರು ಬಿಬಿಎಂಪಿ ಅಡಿಷನಲ್ ಕಮಿಷನರ್ ಆಜಿತ್ ಕುಮಾರ್ ಹೆಗ್ಡೆ ಎಸ್, ಶಿಕ್ಷಣ ಇಲಾಖೆಯ ಡಿಡಿಪಿಐ ಕೆ.ಗಣಪತಿ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಚ್‌.ಗಂಗಾಧರ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್, ಮಂದಾರ್ತಿ ಹೋಬಳಿ ಇಸಿಒ ರಾಘವ ಶೆಟ್ಟಿ, ಉಡುಪಿಯ ಡಾ.ಎ.ವಿ.ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಡಾ.ವಿರೂಪಾಕ್ಷ ದೇವರಮನೆ, ಕಾಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಲಂಧರ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಶಾಲೆಗೆ ಸ್ಥಳಾವಕಾಶ ಹಾಗೂ ಕಟ್ಟಡ ಒದಗಿಸಿದ ಸುರೇಂದ್ರ ಪೂಜಾರಿ ಹಾಗೂ ಸುಪ್ರಿತಾ ಸುರೇಂದ್ರ ಪೂಜಾರಿ ಅವರನ್ನು ಗೌರವಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ರತ್ನಶೀಲ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪಾವನ ಎಂ. ಹೆಗ್ಡೆ, ಗ್ರಾವಿಟಿ ಇಂಗ್ಲಿಷ್ ಮೀಡಿಯಂನ ಸ್ಕೂಲ್‌ನ ಪ್ರಾಂಶುಪಾಲ ಜ್ಯೋತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT