ಬುಧವಾರ, ಜನವರಿ 20, 2021
17 °C

ಕಾಂಗ್ರೆಸ್‌ ಸರ್ಕಾರ ಉಳಿದಿದ್ದು ಡ್ರಗ್ಸ್‌ ಮಾಫಿಯಾದಿಂದ: ಕಟೀಲ್‌ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಹಿಂದಿನ ಕಾಂಗ್ರೆಸ್‌ ಸರ್ಕಾರ ಉಳಿದುಕೊಂಡಿದ್ದು, ಆಡಳಿತ ನಡೆಸಿದ್ದು ಡ್ರಗ್‌ ಮಾಫಿಯಾದಿಂದ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಉಡುಪಿಯಲ್ಲಿ ಶುಕ್ರವಾರ ನಡೆದ ಗ್ರಾಮಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಸರ್ಕಾರವಿದ್ದಾಗ ಮಾದಕ ವಸ್ತುಗಳ ಜಾಲಕ್ಕೆ ಸಿಲುಕಿ ಮಕ್ಕಳು ಹಾಳಾಗುತ್ತಿದ್ದಾರೆ, ರಕ್ಷಿಸಿ ಎಂದು ಶಾಸಕರು ವಿಧಾನ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಆದರೂ ಸರ್ಕಾರ ಕ್ರಮ ತೆಗೆದುಕೊಳ್ಳಲಿಲ್ಲ. ಆದರೆ, ಯಡಿಯೂರಪ್ಪ‍ ಸರ್ಕಾರ ಡ್ರಗ್ ಮಾಫಿಯಾ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಡ್ರಗ್ ಮುಕ್ತ ಕರ್ನಾಟಕಕ್ಕೆ ಪಣತೊಟ್ಟಿದೆ’ ಎಂದು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು