ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಶೇ 80 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು''

ಅನುದೀಪ್ ದಂಪತಿ ನಿವಾಸಕ್ಕೆ ಭೇಟಿನೀಡಿ ಅಭಿನಂದಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್
Last Updated 27 ಡಿಸೆಂಬರ್ 2020, 16:31 IST
ಅಕ್ಷರ ಗಾತ್ರ

ಉಡುಪಿ: ರಾಜ್ಯದ ಶೇ 80ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪಂಚಾಯಿತಿ ಚುನಾವಣೆಯಲ್ಲಿ ಮತದಾರರು ಹರಸಿದ್ದಾರೆ ಎಂಬ ವಿಶ್ವಾಸವಿದೆ. ಪಕ್ಷದ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಕುಟುಂಬ ಮಿಲನ, ಪಂಚರತ್ನ, ಗ್ರಾಮ ಸ್ವರಾಜ್ಯ ಯಾತ್ರೆ ಮಾಡಲಾಗಿತ್ತು. ಇದರ ಫಲವಾಗಿ ಬಿಜೆಪಿ ಬೆಂಬಲಿತರಿಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ ಎಂದರು.

ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಕೊರತೆ ಎದುರಾಗಿತ್ತು. ಕಾಂಗ್ರೆಸ್‌ ಮುಳುಗುವ ಹಡಗಾಗಿದ್ದು, ಕೃತಕ ಆಮ್ಲಜನಕದ ಸಹಾಯದಿಂದ ಬದುಕಿದೆ ಎಂದು ಕಟೀಲ್ ವ್ಯಂಗ್ಯವಾಡಿದರು.

ಮುತ್ತಿಗೆ ಹಾಕುವುದು ಭಯೋತ್ಪಾದನಾ ಚಟುವಟಿಕೆ:ದೇಶದ್ರೋಹಿ ಚಟುವಟಿಕೆಗಳನ್ನು ನಡೆಸಿದಾಗ ಕಾನೂನಿನಡಿ ಕ್ರಮ ತೆಗೆದುಕೊಳ್ಳುವುದು ಸಹಜ. ಬಂಧನದ ವಿರುದ್ಧ ಕಾನೂನು ಪ್ರಕಾರ ಹೋರಾಟ ನಡೆಸಬೇಕೆ ಹೊರತು ಮುತ್ತಿಗೆ ಹಾಕುವುದು ಖಂಡನೀಯ. ಮುತ್ತಿಗೆ ಹಾಕುವುದು ಕೂಡ ಭಯೋತ್ಪಾದನೆಯಂತೆ. ಇಂತಹ ಘಟನೆಗಳ ವಿರುದ್ಧ ರಾಜ್ಯ ಸರ್ಕಾರ ಕೈಕುಟ್ಟಿ ಕೂರುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ನಳಿನ್‌ ಪಿಎಫ್‌ಐ ಸಂಘಟನೆ ವಿರುದ್ಧ ಕಿಡಿ ಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT