ಸೋಮವಾರ, ಅಕ್ಟೋಬರ್ 3, 2022
20 °C
ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ 

ಬಡವರ ಪರ ನಿಂತ ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ಬ್ರಹ್ಮಶ್ರೀ ನಾರಾಯಣಗುರು ಅವರು ಬಡವರ ಪರ ನಿಂತು ಕೆಲಸ ಮಾಡಿದ ಮಹಾನ್ ಚೇತನ. ತುಳಿತಕ್ಕೊಳಗಾಗಿದ್ದ ಹಿಂದುಳಿದ ವರ್ಗದವರನ್ನು ಮೇಲೆತ್ತಿ ಸಮಾನತೆಯ ತತ್ವವನ್ನು ಸಾರಿದ ಮಹಾನ್ ವ್ಯಕ್ತಿತ್ವ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.

ಹೆಬ್ರಿಯ ಬ್ಲಾಕ್‌ ಕಾಂಗ್ರೆಸ್ ವತಿಯಿಂದ ಶನಿವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

ಜಾತಿ ವ್ಯವಸ್ಥೆಯಲ್ಲಿದ್ದ ತೊಡಕುಗಳನ್ನು ನಿವಾರಿಸಲು ನಾರಾಯಣ ಗುರು ಪಣತೊಟ್ಟಿದ್ದರು. ಇಂದಿನ ಸಮಾಜದಲ್ಲಿ ಜಾತಿ ಧರ್ಮದ ಮೇಲೆ ಸಮಾಜವನ್ನು ಒಡೆಯುತ್ತಿರುವುದಕ್ಕೆ ಮಂಜುನಾಥ ಪೂಜಾರಿ ಆತಂಕ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ಹಿರಿಯ ಕಾಂಗ್ರೆಸ್ ಮುಖಂಡ ಶೀನಾ ಪೂಜಾರಿ ವಿವಿಧ ಘಟಕದ ಪ್ರಮುಖರಾದ ಎಚ್. ಜನಾರ್ದನ, ಸಂತೋಷ್ ನಾಯಕ್‌, ದಿನೇಶ್ ಶೆಟ್ಟಿ, ಶಶಿಕಲಾ ಆರ್ .ಪೂಜಾರಿ ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು