ಕುಂದಾಪುರ: ‘ರಾಷ್ಟ್ರೀಯ ಶಿಕ್ಷಣ ನೀತಿಯಂತಹ ಚಟುವಟಿಕೆಗಳು ಸಮಾಜದಲ್ಲಿ ಚರ್ಚೆಗೆ ಬಾರದಿದ್ದರೆ ಒಳ್ಳೆಯ ಕೆಲಸಗಳು ನಿರ್ಲಿಪ್ತವಾಗುವ ಅಪಾಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಒಂದಷ್ಟು ಚರ್ಚೆಗಳು ಸಮಾಜ ಹಾಗೂ ಶಿಕ್ಷಕರ ಮಧ್ಯೆ ಆಗಬೇಕು’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ನೇತೃತ್ವದಲ್ಲಿ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿ, ಮುಂದಿನ ಪೀಳಿಗೆ ಭಾರತದ ಸದೃಢ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ. ಇಂದಿನ ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆ ಅವಶ್ಯವಿರುವ ಸಂದಿಗ್ಧ ಸ್ಥಿತಿಯಲ್ಲೂ ಶಿಕ್ಷಕರು ಮೌನವಾಗಿದ್ದುಕೊಂಡೆ ವಿವಾದಗಳಿಲ್ಲದೆ ಜಾಗೃತ ಸಮಾಜ ನಿರ್ಮಾಣ ಮಾಡುವ ಶಕ್ತಿ ಹೊಂದಿದ್ದಾರೆ ಎಂದರು.

ರಾಜ್ಯದ ಜನಸಂಖ್ಯೆಯಲ್ಲಿ ಶೇ ಒಂದಕ್ಕಿಂತ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಕೊಡಲು ಸಾಧ್ಯವೇ ಇಲ್ಲ. ಆರೂವರೆ ಕೋಟಿ ಜನಸಂಖ್ಯೆಯಲ್ಲಿ ಕೇವಲ ಆರೂವರೆ ಲಕ್ಷ ಜನರಿಗೆ ಸರ್ಕಾರಿ ಉದ್ಯೋಗ ಕೊಡಬಹುದು. ರಾಷ್ಟೀಯ ಶಿಕ್ಷಣ ನೀತಿ ಜಾರಿಗೊಳಿಸುವ ಅನಿವಾರ್ಯತೆ ಮಧ್ಯೆ ಒಂದಷ್ಟು ರಾಜಕೀಯ ಸಂಘರ್ಷಗಳು ನಡೆಯುತ್ತಿವೆ ಎಂದರು.

ಉಪನ್ಯಾಸ ನೀಡಿದ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಪುಸ್ತಕ ಜ್ಞಾನಕ್ಕಿಂತ ಅನುಭವದ ಜ್ಞಾನ ಮೇಲು ಎನ್ನುವ ಸತ್ಯ ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅನುಭವ ಜ್ಞಾನ ಬೆರೆತಾಗ ಮಾತ್ರ ಮಾರ್ಗದರ್ಶನ ಮಾಡಲು ಸಾಧ್ಯ. ಶಿಕ್ಷಕ ವೃತ್ತಿಯು ಪವಿತ್ರ, ಶ್ರೇಷ್ಠ, ಗೌರವಯುತವಾದ ವೃತ್ತಿ. ಆತ್ಮಸಾಕ್ಷಿಹೆ ಅನುಗುಣವಾಗಿ ಕೆಲಸ ಮಾಡಿದಾಗ ವೃತ್ತಿಯ ಶ್ರೇಷ್ಠತೆ ತಲುಪುತ್ತೇವೆ. ವೃತ್ತಿಯ ಘನತೆ ಎತ್ತಿ ಹಿಡಿಯಲು ನಾವು ಸದಾ ಬದ್ದರಾಗಿರಬೇಕು ಎಂದರು.

ಸಮೂಹ ಸಂಪನ್ಮೂಲ ವ್ಯಕ್ತಿ ಬಿದ್ಕಲ್ಕಟ್ಟೆಯ ಶಿಕ್ಷಕ ನಾಗರಾಜ್ ಆಚಾರ್ಯ ಅವರು ಮಕ್ಕಳ ನೀತಿ ಕಥೆ ಆಧರಿಸಿ ರಚಿಸಿದ ಛಂದೋಬದ್ಧ ಯಕ್ಷಗಾನ ‘ಪ್ರಸಂಗ ಚಂದ್ರಚಮೂರ’ ಪುಸ್ತಕವನ್ನು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಬಿಡುಗಡೆಗೊಳಿಸಿದರು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಂದಾಯ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ, ಬಂಟರ ಸಂಘದ ಸಂಚಾಲಕ ಸಂಪತ್ ಕುಮಾರ್ ಶೆಟ್ಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಮುಖರಾದ ಗಣೇಶ್ ಕುಮಾರ್ ಶೆಟ್ಟಿ ಮೊಳಹಳ್ಳಿ, ಉದಯ ಕುಮಾರ್ ಶೆಟ್ಟಿ, ಶಿವರಾಮ್, ಕುಸುಮಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಎ. ಶಂಕರ್ ಐತಾಳ್, ನವೀನ್ಚಂದ್ರ ಹೆಗ್ಡೆ, ಉದಯ್ ಮಡಿವಾಳ, ಬಾಲಕೃಷ್ಣ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಪ್ರದೀಪ್ ಕುಮಾರ್ ಭಂಡಾರಿ, ಚಂದ್ರ ನಾಯ್ಕ್, ಸತ್ಯನಾರಾಯಣ ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ್ ನಾಯ್ಕ್ ವಂದಿಸಿದರು. ಶಿಕ್ಷಕರಾದ ಶಶಿಧರ, ಮಾದಯ್ಯ ಶೆಟ್ರ ಮನೆ ಸಂತೋಷ ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.