ಇಂದಿನಿಂದ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ

ಶನಿವಾರ, ಏಪ್ರಿಲ್ 20, 2019
29 °C

ಇಂದಿನಿಂದ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ

Published:
Updated:
Prajavani

ಉಡುಪಿ: ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಇದೇ 5ರಿಂದ 7ರ ವರೆಗೆ ‘ಪಿ.ಶಿವಾಜಿ ಶೆಟ್ಟಿ ಸ್ಮಾರಕ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ–2019’ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ್‌ ಕಣಿವೆ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯಲ್ಲಿ 28 ಕಾಲೇಜುಗಳು ಭಾಗವಹಿಸಲಿವೆ. ಅಣಕು ನ್ಯಾಯಾಲಯ, ಕಾನೂನು ರಸಪ್ರಶ್ನೆ ಹಾಗೂ ತೀರ್ಪು ಬರವಣಿಗೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಕಾನೂನು ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ 42 ವಕೀಲರು ಸ್ಪರ್ಧೆಯಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ವಕೀಲ ವೃತ್ತಿಯಲ್ಲಿ ಪ್ರಭುತ್ವ ಸಾಧಿಸಲು ಹಾಗೂ ಕಾನೂನಿನ ಬಗ್ಗೆ ಆಳವಾದ ಜ್ಞಾನ ಹೊಂದಲು ಅಣಕು ನ್ಯಾಯಾಲಯ ಸ್ಪರ್ಧೆ ಅನುಕೂಲವಾಗಲಿದೆ. ಅಲ್ಲದೆ, ತಂತ್ರಗಾರಿಕೆಯನ್ನು ಮೈಗೂಡಿಸಿಕೊಳ್ಳಲು ಹಾಗೂ ವಿದ್ಯಾರ್ಥಿಗಳನ್ನು ವೃತ್ತಿಪರರನ್ನಾಗಿ ತರಬೇತಿಗೊಳಿಸಲು ಸಹಕಾರಿ ಆಗಲಿದೆ ಎಂದು ಹೇಳಿದರು.

ಏ. 5ರಂದು ಸಂಜೆ 4.30ಕ್ಕೆ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ. ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶ ಸಿ.ಎಂ.ಜೋಶಿ ಅಧ್ಯಕ್ಷತೆ ವಹಿಸುವರು. ಬೆಂಗಳೂರು ಸಿಎಂಆರ್‌ ವಿಶ್ವವಿದ್ಯಾಲಯದ ಸ್ಕೂಲ್‌ ಆಫ್‌ ಲೀಗಲ್‌ ಸ್ಟಡೀಸ್‌ ವಿಭಾಗದ ಡೀನ್‌ ಪ್ರೊ.ಟಿ.ಆರ್‌.ಸುಬ್ರಹ್ಮಣ್ಯ, ಜಯಂತಿ ಪಿ.ಶಿವಾಜಿ ಶೆಟ್ಟಿ ಅತಿಥಿಗಳಾಗಿ ಭಾಗವಹಿಸುವರು.

7ರಂದು ಸಂಜೆ 4ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಹೈಕೋರ್ಟ್‌ ನ್ಯಾಯಾಧೀಶರಾದ ಬಿ.ವೀರಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಯಂತಿ ಪಿ. ಶಿವಾಜಿ ಶೆಟ್ಟಿ, ಕಾರ್ಯಕ್ರಮದ ಸಂಯೋಜಕಿ ನಿರ್ಮಲಾ ಕುಮಾರಿ, ಕಾಲೇಜಿನ ಹಿರಿಯ ಉಪನ್ಯಾಸಕ ಶಂಕರ ಮೂರ್ತಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !