ಕಾಪು (ಪಡುಬಿದ್ರಿ): ಇಲ್ಲಿನ ಶ್ರೀಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ 9.9ಕ್ಕೆ ನವದುರ್ಗಾ ಮಂಟಪದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿ ಕೆ.ಪಿ. ಕುಮಾರಗುರು ತಂತ್ರಿಯವರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ಮಾಡಲಾಯಿತು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಗ್ರಾಮ ದೇವರಾದ ಒಡೆಯ ಶ್ರೀಲಕ್ಷ್ಮಿ ಜನಾರ್ದನ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಿ ಶಂಕುಸ್ಥಾಪನೆಯ ಕಲ್ಲುಗಳನ್ನು ಪುಷ್ಕರಣಿಯಲ್ಲಿ ಶುದ್ಧೀಕರಿಸಿ, ಅಮ್ಮನ ಸನ್ನಿಧಾನಕ್ಕೆ ತಂದು ವಿಶೇಷ ಪ್ರಾರ್ಥನೆ ನೆರವೇರಿಸಿದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಜಾತ್ಯತೀತ ಜನತಾದಳ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನವದುರ್ಗೆಯರ ಹೆಸರಿನ ಚೀಟಿ ತೆಗೆಯುವ ಮೂಲಕ ಕೊರಂಗ್ರಪಾಡಿ ದೊಡ್ಡಮನೆ ನೇತ್ರಾವತಿ ಶೆಡ್ತಿಯವರ ಸ್ಮರಣಾರ್ಥ, ಕಾಪು ದೇವಿ ಪ್ರಸಾದ್ ಕನ್ಸ್ಟ್ರಕ್ಷನ್ ಆಡಳಿತ ನಿರ್ದೇಶಕ ಬೀನಾ ವಾಸುದೇವ ಶೆಟ್ಟಿ ಕಟ್ಟಡ ನಿರ್ಮಿಸಿ ಕೊಡುವುದಾಗಿ ಗುತ್ತಿಗೆದಾರ ಪರಮೇಶ್ ಆಚಾರ್ಯಗೆ ಪ್ರಸಾದ ನೀಡಿ ಮುಂಗಡ ನೀಡುವ ಮೂಲಕ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಯಿತು.

ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಅನಿಲ್ ಬಳ್ಳಾಲ್ ಕಾಪು ಬೀಡು, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ದಾನಿಗಳಾದ ನಾರಾಯಣ ಶೆಟ್ಟಿ ಮೂಳೂರು, ಪ್ರಮುಖರಾದ ದಿವಾಕರ ಶೆಟ್ಟಿ ಕೊಡವೂರು, ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಅಶೋಕ್ ಕುಮಾರ್ ಶೆಟ್ಟಿ, ಕೆ.ವಿಶ್ವನಾಥ್, ಸಂದೀಪ್ ಕುಮಾರ್ ಮಂಜ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯಾ, ವಿಕ್ರಂ ಕಾಪು, ನಿರ್ಮಲ್ ಕುಮಾರ್ ಹೆಗ್ಡೆ, ಅನಿಲ್ ಕುಮಾರ್ ಕಾಪು, ಜಗದೀಶ್ ಬಂಗೇರ, ಚಂದ್ರಶೇಖರ ಅಮೀನ್, ರವೀಂದ್ರ ಎಂ., ಬಾಬು ಮಲ್ಲಾರ್, ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಗೀತಾಂಜಲಿ ಎಂ ಸುವರ್ಣ, ಶಿಲ್ಪಾ ಜಿ ಸುವರ್ಣ, ಸಂಚಾಲಕಿ ಸಾವಿತ್ರಿ ಗಣೇಶ್, ಮಧುಕರ್ ಎಸ್., ಸುನಿಲ್ ಎಸ್. ಪೂಜಾರಿ, ಜಯರಾಮ್ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.