ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನವದುರ್ಗೆಯರ ಉಪಾಸನೆಯಿಂದ ಅನುಗ್ರಹ ಪ್ರಾಪ್ತಿ: ವಿನಯ ಗುರೂಜಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
Published 4 ಸೆಪ್ಟೆಂಬರ್ 2024, 4:36 IST
Last Updated 4 ಸೆಪ್ಟೆಂಬರ್ 2024, 4:36 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ‘ದೇವರನ್ನು ಪೂಜೆ ಮಾಡಬೇಕಾದರೆ ದೇವರ ಮಹಿಮೆ, ದೇವಸ್ಥಾನದ ಬಗ್ಗೆ ತಿಳಿದುಕೊಂಡು ಹೋದಾಗ ಶ್ರದ್ಧೆ ಇನ್ನೂ ಜಾಸ್ತಿಯಾಗುತ್ತದೆ’ ಎಂದು ಗೌರಿಗದ್ದೆ ವಿನಯ ಗುರೂಜಿ ಅಭಿಪ್ರಾಯಪಟ್ಟರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ, ಸಮಿತಿಯ ಉದ್ಘಾಟನಾ ಸಮಾರಂಭದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನವದುರ್ಗೆಯರ ಉಪಾಸನೆಯಿಂದ ಮನಃಶಾಂತಿ, ಅನುಗ್ರಹ ಪ್ರಾಪ್ತಿಯಾಗುತ್ತದೆ. ಬ್ರಹ್ಮತೇಜಸ್ಸು, ಮಂತ್ರಶಕ್ತಿ, ತಪಸ್ಸು ಈ ಮೂರನ್ನು ಮನುಷ್ಯ ತಿಳಿದುಕೊಂಡಾಗ ಪೂರ್ಣವಾಗುತ್ತಾನೆ ಎಂದು ನುಡಿದ ಅವರು, ತಾವು ಹಾಗೂ ಭಕ್ತರ ಕಡೆಯಿಂದ ದೇಗುಲಕ್ಕೆ ಚಿನ್ನ ಹಾಗೂ ಬೆಳ್ಳಿ ಸಮರ್ಪಣೆ ಮಾಡುವುದಾಗಿ ಭರವಸೆ ನೀಡಿದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ‘200 ವರ್ಷಗಳ ಇತಿಹಾಸವಿರುವ ಈ ಕ್ಷೇತ್ರದ ರಥವನ್ನೆಳೆಯುವ ಕೆಲಸವನ್ನೂ ಎಲ್ಲರೂ ಅನೂಚಾನವಾಗಿ ಮಾಡಿದ್ದಾರೆ. ಭಕ್ತರು ದೇವಿಯ ಅಭೀಷ್ಟೆಯಂತೆ ಸೇವೆಯಲ್ಲಿ ಭಾಗಿಗಳಾಗಿ’ ಎಂದು ಕರೆ ನೀಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶ್ಯಾಮಿಲಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಜಿ. ಶಂಕರ್, ಮೂಡಬಿದ್ರಿ ಆಳ್ವಾಸ್ ಫೌಂಡೇಷನ್‌ನ ಅಧ್ಯಕ್ಷ ಎಂ.ಮೋಹನ್ ಆಳ್ವ, ಆಂಧ್ರಪ್ರದೇಶದ ಕಲ್ಯಾಣ ದುರ್ಗಾ ಶಾಸಕ ಅಮಿಲಿನೆನಿ ಸುರೇಂದ್ರ ಬಾಬು, ಶಾಸಕರಾದ ಯಶ್‌ಪಾಲ್‌ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರ್ ಪ್ರತಿಭಾ ಆರ್., ಮಹೇಶ್ ವಿಕ್ರಮ್ ಹೆಗ್ಡೆ, ಎರ್ಮಾಳು ಚಂದ್ರಹಾಸ ಶೆಟ್ಟಿ ಪೂನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಮನೋಹರ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಇದ್ದರು.

ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ದಾಮೋದರ ಶರ್ಮಾ ಬಾರ್ಕೂರು ನಿರೂಪಿಸಿದರು. ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT