ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕಿತ ನಕ್ಸಲ್‌ ಸುರೇಶ್‌ ಬಂಧನ: ಐಸಿಯುನಲ್ಲಿ ಚಿಕಿತ್ಸೆ

Published 18 ಫೆಬ್ರುವರಿ 2024, 0:30 IST
Last Updated 18 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು/ಉಡುಪಿ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಶಂಕಿತ ನಕ್ಸಲ್‌ ಸುರೇಶ್ ಅಲಿಯಾಸ್‌ ಪ್ರದೀಪ್‌ನನ್ನು ಕೇರಳದ ಕಣ್ಣೂರಿನ ಕಂಚಿರಕೊಲ್ಲಿ ಅರಣ್ಯದಲ್ಲಿ ಅಲ್ಲಿಯ ಪೊಲೀಸರು ಬಂಧಿಸಿದ್ದಾರೆ.

ಕಾಡಿನಲ್ಲಿ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್‌ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ಹಲವೆಡೆ ಸುರೇಶ್ ವಿರುದ್ಧ 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿ ಚೇತರಿಸಿಕೊಂಡ ಬಳಿಕ ಬಾಡಿ ವಾರೆಂಟ್‌ ಪಡೆದು ರಾಜ್ಯಕ್ಕೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ನಕ್ಸಲ್ ನಿಗ್ರಹ ದಳದ ಎಸ್‌ಪಿ ಜಿತೇಂದ್ರ ಕುಮಾರ್ ದಯಂ ಮಾಹಿತಿ ನೀಡಿದರು.

‘ಸುರೇಶ್‌ ಬಂಧನದ ಬಗ್ಗೆ ಕೇರಳ ಪೊಲೀಸರಿಂದ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ, ಬಂಧನವಾಗಿರುವ ಸುದ್ದಿಯಷ್ಟೇ ತಿಳಿದಿದೆ. ಆತನ ವಿರುದ್ಧ ಯಾವ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ. ಕೇರಳ ಪೊಲೀಸರಿಂದ ಅಧಿಕೃತ ಮಾಹಿತಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ‘‍ಪ್ರಜಾವಾಣಿ’ಗೆ ತಿಳಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT