ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದ ಕುಂದಾಪುರ ತಾಲ್ಲೂಕಿನ ಅಮಾಸೆಬೈಲು ಸಮೀಪದ ತೊಂಬಟ್ಟುವಿನ ಲಕ್ಷ್ಮಿ ತೊಂಬಟ್ಟು ಅವರು ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಸಮ್ಮುಖದಲ್ಲಿ ಭಾನುವಾರ ಶರಣಾದರು.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಿ ತೊಂಬಟ್ಟು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಆಹ್ವಾನವನ್ನು ಸುದ್ದಿ ವಾಹಿನಿಗಳ ಮೂಲಕ ನೋಡಿದ್ದೇನೆ. ಆ ಅವಕಾಶವನ್ನು ಉಪಯೋಗಿಸಿಕೊಂಡು ಮುಖ್ಯವಾಹಿನಿಗೆ ಬಂದಿದ್ದೇನೆ ಎಂದರು.

‘ನಮ್ಮ ಊರಿಗೆ ಈಗಲೂ ಏನೂ ಸೌಲಭ್ಯವಿಲ್ಲ. ರಸ್ತೆ, ಆಸ್ಪತ್ರೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು. ನಾನು ಸ್ವ ಇಚ್ಛೆಯಂತೆ ಬಂದಿದ್ದೇನೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ರಾಜ್ಯ ಸರ್ಕಾರವು ಮೂರು ವರ್ಗದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಿಸಿದೆ. ನಮ್ಮ ರಾಜ್ಯದ ನಿವಾಸಿಗಳಾಗಿದ್ದರೆ ‘ಎ’ ವರ್ಗದ ಪ್ಯಾಕೇಜ್ ನೀಡಲಾಗುತ್ತಿದೆ. ಲಕ್ಷ್ಮಿ ಅವರು ‘ಎ’ ವರ್ಗದ ನಕ್ಸಲ್ ಆಗಿದ್ದಾರೆ. ಪುನರ್ವಸತಿ, ಸ್ವ ಉದ್ಯೋಗ, ವಿದ್ಯಾಭ್ಯಾಸಕ್ಕೂ ಅವಕಾಶ ಇದೆ. ಅವರ ಬೇಡಿಕೆಗನುಗುಣವಾಗಿ ಅದನ್ನು ನೀಡಲಾಗುತ್ತದೆ. ಲಕ್ಷ್ಮಿ ಅವರ ಊರಿನ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, ‘ಲಕ್ಷ್ಮಿ ತೊಂಬಟ್ಟು ಅವರ ವಿರುದ್ಧ 2007 ಮತ್ತು 2008ರಲ್ಲಿ ಗುಂಡಿನ ದಾಳಿ ನಡೆಸಿದ, ಭಿತ್ತಿಪತ್ರ ಅಂಟಿಸಿದ ಮತ್ತು ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿ, ಬೆದರಿಕೆ ಹಾಕಿದ ಪ್ರಕರಣಗಳು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ’ ಎಂದು ತಿಳಿಸಿದರು.

ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯ ಕೆ.ಪಿ. ಶ್ರೀಪಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಇದ್ದರು.

ಅದಕ್ಕೂ ಮೊದಲು ಪೊಲೀಸ್ ಭದ್ರತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಲಕ್ಷ್ಮಿ ಅವರನ್ನು ಕರೆದೊಯ್ದು ಶರಣಾಗತಿ ಪ್ರಕ್ರಿಯೆಗಳನ್ನು ಪೂರೈಸಲಾಗಿತ್ತು. ಲಕ್ಷ್ಮಿ ಅವರ ಪತಿ ಸಂಜೀವ ಕುಮಾರ್, ಸಹೋದರರಾದ ವಿಠಲ್ ಪೂಜಾರಿ, ಬಸವ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದರು.

ನಕ್ಸಲ್ ಚಟುವಟಿಕೆಯಲ್ಲಿದ್ದಾಗಲೇ 2008ರಲ್ಲಿ ಸಂಜೀವ ಕುಮಾರ್ ಅವರನ್ನು ಮದುವೆಯಾಗಿದ್ದ ಲಕ್ಷ್ಮಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ಲಕ್ಷ್ಮಿ ತೊಂಬಟ್ಟು ಅವರನ್ನು ಕುಂದಾಪುರದ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಅವರನ್ನು ಮಂಗಳೂರಿನ ಜೈಲಿಗೆ ಕರೆದೊಯ್ಯಲಾಯಿತು.

‘ಸಂಪರ್ಕಕ್ಕೆ ಸಿಕ್ಕಿರಲಿಲ್ಲ’

‘ಲಕ್ಷ್ಮಿ ಅವರು ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಿಂದ ದೂರವಿದ್ದು, ಆಂಧ್ರಪ್ರದೇಶದಲ್ಲಿ ನೆಲೆಸಿದ್ದರಿಂದ ನಮ್ಮ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈಚೆಗೆ ಆರು ಮಂದಿ ನಕ್ಸಲರು ಮುಖ್ಯವಾಹಿನಿಗೆ ಬಂದ ಬಳಿಕ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿದರು ಮತ್ತು ಮುಖ್ಯವಾಹಿನಿಗೆ ಬರಲು ಸಿದ್ಧವಿರುವುದಾಗಿ ತಿಳಿಸಿದರು’ ಎಂದು ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯ ಕೆ.ಪಿ.ಶ್ರೀಪಾಲ್ ತಿಳಿಸಿದರು.

‘ಲಕ್ಷ್ಮಿ ಅವರ ಗಂಡ ಸಂಜೀವ ಕುಮಾರ್ ಅವರು ಈ ಹಿಂದೆಯೇ ಆಂಧ್ರಪ್ರದೇಶದಲ್ಲಿ ಮುಖ್ಯವಾಹಿನಿಗೆ ಬಂದಿದ್ದರು. ಅವರ ವಿರುದ್ಧ ಈಗ ಯಾವುದೇ ಪ್ರಕರಣಗಳಿಲ್ಲ. ಲಕ್ಷ್ಮಿ ವಿರುದ್ಧ ಮೂರು ಪ್ರಕರಣಗಳಷ್ಟೇ ಇರುವುದರಿಂದ ಅವರು ಶೀಘ್ರ ಜಾಮೀನಿನ ಮೇಲೆ ಹೊರಬರುವ ಸಾಧ್ಯತೆ ಇದೆ. ನಮ್ಮ ಮಾಹಿತಿಯ ಪ್ರಕಾರ ಇನ್ನು ಕರ್ನಾಟಕದಲ್ಲಿ ಯಾವುದೇ ನಕ್ಸಲರಿಲ್ಲ’ ಎಂದರು.

ಶಸ್ತ್ರಾಸ್ತ್ರ ಹೋರಾಟದಿಂದ ಪ್ರಯೋಜನವಿಲ್ಲ. ಚಳವಳಿ ಮಾಡಲು ಅವಕಾಶವಿದೆ ಎಂದು ಅರಿತು ಈ ಹಿಂದೆಯೇ ನಾನು ಮುಖ್ಯವಾಹಿನಿಗೆ ಬಂದಿದ್ದೇನೆ.
ಸಂಜೀವ ಕುಮಾರ್, ಲಕ್ಷ್ಮಿ ತೊಂಬಟ್ಟು ಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.