ಬುಧವಾರ, ಆಗಸ್ಟ್ 4, 2021
20 °C
ಸೋಂಕಿತರಿಗೆ ಮುಂಬೈ ಸಂಪರ್ಕ; ಪ್ರಕರಣ 902ಕ್ಕೇರಿಕೆ

13 ಮಂದಿಯಲ್ಲಿ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 13 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ಐವರು ಮಹಿಳೆಯರು, ಏಳು ಪುರುಷರು ಹಾಗೂ ಒಬ್ಬ ಬಾಲಕ ಇದ್ದಾನೆ.

ಮುಂಬೈ ಸಂಪರ್ಕ:

ಸೋಂಕಿತರಲ್ಲಿ 12 ಮಂದಿಗೆ ಮುಂಬೈನ ಸಂಪರ್ಕವಿದ್ದು, ಒಬ್ಬರ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಎಲ್ಲರಿಗೂ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಕೊಂಚ ನೆಮ್ಮದಿ:

ಕಳೆದ ಒಂದು ವಾರದಿಂದಲೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರುಮುಖವಾಗಿ ಸಾಗಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ಸೋಂಕಿತ ಪ್ರಕರಣಗಳು ಉಡುಪಿಯಲ್ಲಿ ದಾಖಲಾಗುವ ಮೂಲಕ ಜನರಲ್ಲಿ ಭೀತಿ ಸೃಷ್ಟಿಯಾಗಿತ್ತು. ಕೇವಲ 6 ದಿನಗಳಲ್ಲಿ ಜಿಲ್ಲೆಯಲ್ಲಿ 702 ಸೋಂಕಿತರು ಪತ್ತೆಯಾಗಿದ್ದರು.

ಭಾನುವಾರ ಕೇವಲ 13 ಪ್ರಕರಣಗಳು ಮಾತ್ರ ಕಾಣಿಸಿಕೊಂಡಿದ್ದು, ಕೊಂಚ ನಿರಾಳ ತಂದಿದೆ. ಜತೆಗೆ, ಬಾಕಿ ಇದ್ದ ಸಾವಿರಾರು ಮಂದಿಯ ಫಲಿತಾಂಶ ಬಹುತೇಕ ಬಂದಿದ್ದು, ಕೇವಲ 264 ಮಾದರಿಗಳ ಫಲಿತಾಂಶ ಬರುವುದು ಮಾತ್ರ ಬಾಕಿ ಇದೆ. ಈ ಅಂಕಿ ಅಂಶಗಳನ್ನು ನೋಡಿದರೆ, ಸೋಂಕಿತರ ಸಂಖ್ಯೆಯೂ ಇಳಿಮುಖವಾಗುತ್ತಾ ಸಾಗುವ ಲಕ್ಷಣಗಳು ಕಾಣುತ್ತಿವೆ.

902ಕ್ಕೇರಿಕೆ:

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 902ಕ್ಕೇರಿಕೆಯಾಗಿದ್ದು, 798 ಸಕ್ರಿಯ ಪ್ರಕರಣಗಳಿವೆ. 103 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು