ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣ ಗುರುಗಳ ಭವನಕ್ಕೆ ಅನುದಾನ ಒದಗಿಸಲು ಬದ್ಧ

ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಲಾಲಾಜಿ ಮೆಂಡನ್
Last Updated 11 ಜನವರಿ 2023, 7:26 IST
ಅಕ್ಷರ ಗಾತ್ರ

ಶಿರ್ವ: ಸಾಮಾಜಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ ಸಮಾಜಕ್ಕೆ ಮಾರ್ಗದರ್ಶಕವಾಗಿದೆ. ಅಂತಹ ಪುಣ್ಯಪುರುಷರ ಹೆಸರಿನಲ್ಲಿ ನಿಗಮ ಸ್ಥಾಪನೆಗೆ ರಾಜ್ಯ ಮುಖ್ಯಮಂತ್ರಿ ಮೌಖಿಕ ಸಮ್ಮತಿ ನೀಡಿದ್ದಾರೆ. ದೆಂದೂರು ಕಲ್ಮಂಜೆ ಬಿಲ್ಲವ ಸಮುದಾಯ ಭವನಕ್ಕೆ ಶಾಸಕರ ನಿಧಿ ಮತ್ತು ಸರ್ಕಾರದ ಮಟ್ಟದಲ್ಲಿ ಅನುದಾನವನ್ನು ಒದಗಿಸಲು ಬದ್ಧ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಭರವಸೆ ನೀಡಿದರು.

ದೆಂದೂರು ಕಲ್ಮಂಜೆ ಬಿಲ್ಲವ ಸೇವಾ ಸಮಿತಿ ವತಿಯಿಂದ ₹1.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಉದ್ದೇಶಿತ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪ್ರಣವಾನಂದ ಸ್ವಾಮೀಜಿ ಅವರ ಪಾದಯಾತ್ರೆಯ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ. ಸಮಸ್ತರು ಕೈ ಜೋಡಿಸಿ ನೂತನ ಸಮುದಾಯ ಭವನವು ಪೂರ್ಣಗೊಂಡು ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿ ಎಂದರು.

ಕಟ್ಟಡ ಸಮಿತಿಯ ಅಧ್ಯಕ್ಷ ರಾಘು ಪೂಜಾರಿ ಕಲ್ಮಂಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗುರ್ಮೆ ಫೌಂಡೇಷನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಣಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಸನ್ ಶೇಖಮ್ಮದ್, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಖಾರಾಮ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್‍ಪಾಲ್ ಎ.ಸುವರ್ಣ, ದೆಂದೂರು ಸಾನದಮನೆ ಸುಧಾಕರ ಶೆಟ್ಟಿ, ಗಣ್ಯರಾದ ಸುಭಾಸ್ ಸಾಲ್ಯಾನ್, ಅಣ್ಣಯ್ಯ ಪೂಜಾರಿ ಕಲ್ಮಂಜೆ, ಗೋಪು ಪೂಜಾರಿ ದೆಂದೂರು, ಸುಧಾಕರ ಪೂಜಾರಿ ಇಂದ್ರಾಳಿ, ಕಲ್ಮಂಜೆ ಸುಧಾಕರ ಪೂಜಾರಿ, ಸುಜಯ ಎಸ್. ಪೂಜಾರಿ, ವಾಸುದೇವ ಉಪಾಧ್ಯಾಯ ಇದ್ದರು.

ದೆಂದೂರು ಬಿಲ್ಲವ ಸೇವಾ ಸಮಿತಿ ಕಲ್ಮಂಜೆ ಅಧ್ಯಕ್ಷ ಸಚಿನ್ ಪೂಜಾರಿ ಸ್ವಾಗತಿಸಿದರು. ಕಟ್ಟಡ ಸಮಿತಿ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ನಾಗರಾಜ ಪೂಜಾರಿ ವಂದಿಸಿದರು. ಚಂದ್ರಶೇಖರ್ ಸಾಲ್ಯಾನ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT