ಕಾಪು (ಪಡುಬಿದ್ರಿ): ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆ ಜಾತ್ರೆಯ ಪ್ರಯುಕ್ತ ಮಂಗಳವಾರ ಶಿಲಾ ಸೇವೆ - ಶಿಲಾ ಪುಷ್ಪ ಸಮರ್ಪಣಾ ಕಾರ್ಯಕ್ರಮ ನಡೆಯಿತು.
ಪ್ರಥಮ ಹಂತದಲ್ಲಿ ಸುಮಾರು ₹35 ಕೋಟಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಸಂದರ್ಭದಲ್ಲಿ ಶಿಲಾ ಸೇವೆ-ಶಿಲಾ ಪುಷ್ಪ ಸಮರ್ಪಣಾ ಸಮಾರಂಭವು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ವತಿಯಿಂದ ನಡೆಯುತ್ತಿದೆ.
ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ‘ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸುಗ್ಗಿ ಮಾರಿಪೂಜೆ ಸಂದರ್ಭದಲ್ಲಿ ಭಕ್ತರಿಗೆ ಶಿಲಾ ಸೇವೆ ಸಮರ್ಪಣೆಗೆ ವಿಶೇಷ ಅವಕಾಶ ಒದಗಿಸಲಾಗಿದೆ’ ಎಂದರು.
ಶಿಲಾ ಸೇವೆಯ ದಾನಿಗಳಾದ ನೈಮಾಡಿ ನಾರಾಯಣ ಶೆಟ್ಟಿ, ಗೋವಿಂದ ಶೆಟ್ಟಿ ಪಾಂಗಾಳ, ಸತೀಶ್ ಪೂಜಾರಿ ದುಬ, ಪುಷ್ಪಲತಾ ಎನ್. ಸಾಲ್ಯಾನ್ ನಡಿಕುದ್ರು, ಸಿ.ಬಿ.ಡಿ ಭಾಸ್ಕರ್ ಶೆಟ್ಟಿ ಕುರ್ಕಾಲು, ಅನುರಾಧಾ ಮನೋಹರ್ ಶೆಟ್ಟಿ, ಸುಗುಣಾ ರತ್ನಾಕರ ಶೆಟ್ಟಿ ನಡಿಕೆರೆ, ಸಾವಿತ್ರಿ ಗಣೇಶ್, ರೇಣುಕಾ ಜೋಗಿ ದೀಪ ಪ್ರಜ್ವಲನೆಗೊಳಿಸಿ, ಶಿಲಾ ಸೇವೆ - ಶಿಲಾ ಪುಷ್ಪ ಸಮರ್ಪಣೆಗೆ ಚಾಲನೆ ನೀಡಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಗೌರವಾಧ್ಯಕ್ಷ ರಾಜಶೇಖರ ಕೋಟ್ಯಾನ್, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿ ಮುಖ್ಯ
ಸಂಚಾಲಕ ರಮೇಶ್ ಶೆಟ್ಟಿ ಕೊಲ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ್ ಅಮೀನ್, ಗಂಗಾಧರ ಸುವರ್ಣ, ಜಗದೀಶ್ ಬಂಗೇರ, ರವೀಂದ್ರ ಎಂ., ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಬಾಬು ಮಲ್ಲಾರು, ಸಮಿತಿಯ ಪ್ರಮುಖರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.