ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪು: ಹಿಜಾಬ್ ತೆಗೆಯಲು ನಿರಾಕರಣೆ– ಪರೀಕ್ಷೆ ಬರೆಯದೆ 9 ವಿದ್ಯಾರ್ಥಿನಿಯರು ವಾ‍ಪಸ್

Last Updated 16 ಮಾರ್ಚ್ 2022, 9:17 IST
ಅಕ್ಷರ ಗಾತ್ರ

ಕಾಪು (ಉಡುಪಿ ಜಿಲ್ಲೆ): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಹೈಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಬುಧವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿದ ಕಾರಣಕ್ಕೆ ಒಂಬತ್ತು ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ವಾಪಸ್ ಮನೆಗೆ ತೆರಳಿದ್ದಾರೆ.

ಬೆಳಿಗ್ಗೆ ಕಾಲೇಜಿಗೆ ಹಿಜಾಬ್ ಹಾಕಿಕೊಂಡು ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ತರಗತಿಗೆ ಬರುವಂತೆ ಪ್ರಾಂಶುಪಾಲರು ಸೂಚನೆ ನೀಡಿದರು. ಆಗ, ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿ ಪ್ರವೇಶಿಸಿದರೆ, ಉಳಿದವರು ನಿರಾಕರಿಸಿ ವಾಪಸ್ ತೆರಳಿದರು.

ಹೈಕೋರ್ಟ್ ಆದೇಶದಂತೆ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ವಿದ್ಯಾರ್ಥಿನಿಯರಿಗೆ ತಿಳಿ ಹೇಳಲಾಯಿತು. ಆದರೆ, ಒಪ್ಪದ ಕಾರಣ ಪ್ರವೇಶ ನಿರಾಕರಿಸಲಾಯಿತು ಎಂದು ಪ್ರಾಂಶುಪಾಲ ಎಂದು ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ತಿಳಿಸಿದರು.

’ಹಿಜಾಬ್ ಧಾರಣೆ ಬದುಕಿನ ಭಾಗವಾಗಿದ್ದು, ನಮಗೆ ಶಿಕ್ಷಣವೂ ಬೇಕು, ಹಿಜಾಬ್ ಕೂಡ ಬೇಕು‘ ಎಂದು ವಿದ್ಯಾರ್ಥಿನಿಯರಾದ ರಿಜಾನಾ ಹಾಗೂ ಶೆಹನಾಜ್ ಹೇಳಿದರು.

ಉಡುಪಿಯಲ್ಲಿ ಗೊಂದಲ ಇಲ್ಲ:

ಹಿಜಾಬ್ ವಿವಾದ ಆರಂಭವಾದ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕಾಲೇಜು ಆವಣರದವರೆಗೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ತರಗತಿ ಪ್ರವೇಶಿಸುವಾಗ ಹಿಜಾಬ್ ಬಿಚ್ಚಿಟ್ಟು ತೆರಳಿದರು.

ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ 6 ವಿದ್ಯಾರ್ಥಿನಿಯರು ಸೇರಿ 40 ಮುಸ್ಲಿಂ ವಿದ್ಯಾರ್ಥಿನಿಯರು ಗೈರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT