ಕಾರ್ಕಳ: ತಾಲ್ಲೂಕಿನ ನಿಟ್ಟೆ ಡಾ.ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು, ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಜಾಗತಿಕ ಹಿರಿಯ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ: ವಿದ್ಯಾರ್ಥಿಗಳ ಸಮಾಗಮ’ ಕಾರ್ಯಕ್ರಮ ಈಚೆಗೆ ನಡೆಯಿತು.

ನಿಟ್ಟೆ ವಿಶ್ವವಿದ್ಯಾಲಯದ ಉಪ ಕುಲಪತಿ ಎಂ.ಎಸ್.ಮೂಡಿತ್ತಾಯ ಮಾತನಾಡಿ, ಸಂಸ್ಥೆಯಲ್ಲಿ ಪ್ರಾಂಶುಪಾಲನಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ನೀಡಿದ ಪ್ರೀತಿ, ಸಹಕಾರದಿಂದ ನಾನು ಈಗ ಉನ್ನತ ಹುದ್ದೆ ಅಲಂಕರಿಸಲು ಸಹಕಾರಿಯಾಗಿದೆ ಎಂದರು.

ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ನಿರಂಜನ್ ಎನ್. ಚಿಪ್ಲೂಂಕರ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಕಲಿತ ಸಂಸ್ಥೆಯ ಜೊತೆ ನಿಕಟ ಸಂಬಂಧ ಇರಿಸಿಕೊಂಡು ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.

ಸಂಸ್ಥೆಯ ಅಭಿವೃದ್ಧಿ ನಿರ್ದೇಶಕ ಎ. ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿಗಳ ಸಂಘದ ನಿರ್ದೇಶಕ ಪ್ರಸನ್ನ ಆರ್. ಕೈಲಾಜೆ ಭಾಗವಹಿಸಿದ್ದರು. ಪ್ರಾಂಶುಪಾಲೆ ವೀಣಾ ಬಿ.ಕೆ. ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಝಾಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸತೀಶ್ ಶೆಟ್ಟಿ ವಂದಿಸಿದರು. ಹಿರಿಯ ವಿದ್ಯಾರ್ಥಿಗಳಾದ ಅನುರಾಧಾ ಭಟ್ ಪ್ರಾರ್ಥಿಸಿದರು. ದೇಚಮ್ಮ ಎಂ.ಎ. ನಿರೂಪಿಸಿದರು

ಕಾಲೇಜು ಆರಂಭದಿಂದ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ, ಸಹಾಯಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದವರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಹಿರಿಯ ವಿದ್ಯಾರ್ಥಿಗಳು, ಉಪನ್ಯಾಸಕರ ಸ್ನೇಹಮಿಲನ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಮನರಂಜನಾ ಕ್ರೀಡೆಗಳು ನಡೆದವು. ಪ್ರಸುಧಾ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರೂಪಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕಿ ಅರ್ಚನಾ ಭಟ್, ವಿದ್ಯಾರ್ಥಿ ಪ್ರತಿನಿಧಿಗಳು ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.