ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣ ಜ್ಞಾನ, ಕೌಶಲಗಳನ್ನು ಸುಧಾರಿಸುತ್ತದೆ

ನಿಟ್ಟೆ ವಿದ್ಯಾಸಂಸ್ಥೆಯ ಘಟಿಕೋತ್ಸವದಲ್ಲಿ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯ
Published 1 ಸೆಪ್ಟೆಂಬರ್ 2024, 3:10 IST
Last Updated 1 ಸೆಪ್ಟೆಂಬರ್ 2024, 3:10 IST
ಅಕ್ಷರ ಗಾತ್ರ

ಕಾರ್ಕಳ: ಯಶಸ್ಸು ಗಮ್ಯ ಸ್ಥಾನವಲ್ಲ, ಬದಲಿಗೆ ನಡೆಯುತ್ತಿರುವ ಅನ್ವೇಷಣೆಯಾಗಿದೆ ಎಂದು ಶ್ರೀರಾಮ್ ಫೈನಾನ್ಸ್‌ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಹೇಳಿದರು.

ತಾಲ್ಲೂಕಿನ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ಘಟಿಕೋತ್ಸವದಲ್ಲಿ ಅವರು ಮಾತನಾಡಿ, ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲಗಳನ್ನು ಸುಧಾರಿಸುತ್ತದೆ. ವ್ಯಕ್ತಿತ್ವ, ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ. ಅಂದುಕೊಂಡ ಕಾರ್ಯ ನಡೆಯದಿದ್ದರೆ ಧೃತಿಗೆಡದೆ ಮುನ್ನಡೆಯಬೇಕು. ಶಿಕ್ಷಣವು ಸಮಾಜದ ಅಡಿಪಾಯ, ಉತ್ತಮ ನಾಳೆಗೆ ನಾಂದಿಯಾಗುತ್ತದೆ ಎಂದರು.

ಸಂಸ್ಥೆಯ ಸಹ ಕುಲಾಧಿಪತಿ ಎಂ. ಶಾಂತರಾಮ್‌ ಶೆಟ್ಟಿ ಮಾತನಾಡಿ, ಶಿಕ್ಷಣವು ಕತ್ತಲೆಯಲ್ಲಿ ಬೆಳಕಿನ ಕಿರಣವಿದ್ದಂತೆ. ಪೋಷಕರು, ವಿದ್ಯೆ ಕಲಿಸಿದ ಗುರುಗಳು, ವಿದ್ಯಾಲಯ, ನಮ್ಮ ಜನ್ಮಭೂಮಿ ನಮ್ಮ ಏಳಿಗೆಗೆ ಕಾರಣ ಎಂಬುದನ್ನು ಮರೆಯಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಮಾತನಾಡಿ, ನಿಟ್ಟೆ, ಮಂಗಳೂರು, ಬೆಂಗಳೂರಿನ ಸಂಸ್ಥೆಯ ಕ್ಯಾಂಪಸ್‌ಗಳಲ್ಲಿ 14 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದು, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದೆ. ತಾಯಿ ಮೀನಾಕ್ಷಿ ಹೆಗ್ಡೆ ಅವರ ಸ್ಫೂರ್ತಿಯೇ ಇದಕ್ಕೆ ಕಾರಣ ಎಂದರು.

ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹಕುಲಾಧಿಪತಿ ವಿಶಾಲ್ ಹೆಗ್ಡೆ, ಆರ್ಥಿಕ ಮತ್ತು ಯೋಜನಾ ವಿಭಾಗದ ನಿರ್ದೇಶಕ ರಾಜೇಂದ್ರ ಎಂ, ಐಎಸ್‌ಆರ್, ಸಿಆರ್‌ಎಲ್ ವಿಭಾಗದ ಉಪಾಧ್ಯಕ್ಷ ಸತೀಶ್ ಕುಮಾರ್ ಭಂಡಾರಿ, ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಗೋಪಾಲ್ ಮುಗೆರಾಯ, ಕುಲಸಚಿವ ಹರ್ಷಾ ಹಾಲನಹಳ್ಳಿ, ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಪ್ರಸಾದ್ ಬಿ.ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT