ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಕಾಶಗಳಿಗೆ ಕೊರತೆಯಿಲ್ಲ: ವಿಶಾಲ್ ಹೆಗ್ಡೆ

Last Updated 26 ನವೆಂಬರ್ 2022, 4:56 IST
ಅಕ್ಷರ ಗಾತ್ರ

ಕಾರ್ಕಳ: ಭಾರತವು ಕ್ಷಿಪ್ರಗತಿಯಲ್ಲಿ ಪ್ರಗತಿಹೊಂದುತ್ತಿರುವ ರಾಷ್ಟ್ರವಾಗಿರುವುದರಿಂದ ತಂತ್ರಜ್ಞಾನ ಮಾತ್ರವಲ್ಲದೆ ತಯಾರಿಕಾ ಕ್ಷೇತ್ರದಲ್ಲೂ ಉದ್ಯೋಗಾವಕಾಶಗಳು ನುರಿತ ತಂತ್ರಜ್ಞರನ್ನು ಕೈಬೀಸಿ ಕರೆಯುತ್ತಿವೆ. ಇಲ್ಲಿ ಅವಕಾಶಗಳಿಗೆ ಕೊರತೆಯಿಲ್ಲ ಎಂದು ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಪೊ-ಚಾನ್ಸಲರ್ ವಿಶಾಲ್ ಹೆಗ್ಡೆ ಹೇಳಿದರು.

ತಾಲ್ಲೂಕಿನ ನಿಟ್ಟೆ ತಾಂತ್ರಿಕ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದ ಆಶ್ರಯದಲ್ಲಿ ಹಳೆ ವಿದ್ಯಾರ್ಥಿಗಳ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಮಾತನಾಡಿ, ಪ್ರದರ್ಶನದಲ್ಲಿದ್ದ 117 ಮಾದರಿಗಳು ವಿದ್ಯಾರ್ಥಿಗಳ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿವೆ. ಇಂದಿನ ದಿನಗಳಲ್ಲಿ ಕಂಪ್ಯೂಟರ್, ಸಾಫ್ಟ್‌ವೇರ್ ಬಳಕೆ ಪ್ರತಿಯೊಂದು ವಿಭಾಗದಲ್ಲಿಯೂ ಅನಿವಾರ್ಯವಾಗಿದ್ದು, ವಿಭಾಗಗಳ ನಡುವಿನ ಪ್ರತ್ಯೇಕತಾ ರೇಖೆಯೇ ಮಾಯವಾಗಿದೆ ಎಂದರು.

ಉಪ್ರಾಂಶುಪಾಲ ಡಾ. ಶ್ರೀನಿವಾಸ ರಾವ್ ಬಿ.ಆರ್, ಅನೂಪ್ ಶೆಟ್ಟಿ ಇದ್ದರು. ಡಾ. ಸೂರ್ಯನಾರಾಯಣ ಕೆ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕ ಸಮಿತ್ ಸುವರ್ಣ ವಂದಿಸಿದರು. ವಿದ್ಯಾರ್ಥಿನಿ ಜೇನ್ ಪೀಟರ್ ಲೋಬೊ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT