ಸಮೀಕ್ಷೆಯ ಹೆಸರಲ್ಲಿ ವಿಳಂಬ ಸಲ್ಲದು: ಜಯಮಾಲ

7

ಸಮೀಕ್ಷೆಯ ಹೆಸರಲ್ಲಿ ವಿಳಂಬ ಸಲ್ಲದು: ಜಯಮಾಲ

Published:
Updated:
Deccan Herald

ಉಡಪಿ: ಜಿಲ್ಲಾಧಿಕಾರಿ ಸಮೀಕ್ಷೆ ಹೆಸರಿನಲ್ಲಿ ಮರಳುಗಾರಿಕೆ ಆರಂಭಕ್ಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಉಸ್ತುವಾರಿ ಸಚಿವೆ ಜಯಮಾಲಾ ಅಸಮಾಧಾನ ವ್ಯಕ್ತಪಡಿಸಿದರು.

ಭಾನುವಾರ ಮರಳುಗಾರಿಕೆ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ಶಾಸಕರ ಜತೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಕ್ಕೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಉಸ್ತುವಾರಿ ಸಚಿವೆಯಾಗಿ ನಾನು ಸೂಚನೆ ನೀಡಿರುವೆ. ಈಗ ಜಿಲ್ಲಾಧಿಕಾರಿ ಮರಳುಗಾರಿಕೆ ಸಂಬಂಧಿಸಿ ಉಪವಿಭಾಗಾಧಿಕಾರಿಗೆ  ಸರ್ವೇ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಕ್ರಮ ಸರಿಯಲ್ಲ.  ಮೇಲಿಂದ ಮೇಲೆ ಸರ್ವೇ ಮಾಡಿಸುತ್ತಾ ಹೋದರೆ ಬಡವರಿಗೆ ಮರಳು ಸಿಗುವುದು ಕಷ್ಟವಾಗುತ್ತದೆ. ಮುಂದಿನ ದಿನದಲ್ಲಿ ಮರಳಿಗಾಗಿ ನಾವೇ ಪ್ರತಿಭಟನೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಲಾಗುತ್ತದೆ ಎಂದರು.

ಶಾಸಕ ಕೆ.ರಘುಪತಿ ಭಟ್‌ ಮಾತನಾಡಿ, ಮರಳು ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರದ ಮೇಲೆ ವ್ಯಾಪಕ ಹೊಡೆತ ಬಿದ್ದಿದೆ. ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಈ ಭಾಗದ ಶಾಸಕರ ನಿರಂತರ ಶ್ರಮದ ಫಲವಾಗಿ ಉಡುಪಿಗೆ ಬಂದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2 ತಾಸುಗಳ ಕಾಲ ಮರಳು ಸಮಸ್ಯೆ ಬಗ್ಗೆ ಚರ್ಚಿಸಿ ಅಂತಿಮವಾಗಿ  ಮರಳು ದಿಬ್ಬಗಳನ್ನು ಗುರುತಿಸಲು ಎನ್‌ಐಟಿಕೆಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿದ್ದರು. ಆದರೆ, ಇಲ್ಲಿಯವರೆಗೂ ಜಿಲ್ಲಾಧಿಕಾರಿ ಅದನ್ನು ಪಾಲಿಸುತ್ತಿಲ್ಲ ಎಂದು ಹೇಳಿದರು.

ಈಗಾಗಲೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮರಳು ದಿಬ್ಬಗಳನ್ನು ಗುರುತಿಸಿ ವರದಿ ನೀಡಿದೆ. ಆದರೆ, ಈ ವರದಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಜಿಲ್ಲಾಧಿಕಾರಿ , ಉಪವಿಭಾಗಾಧಿಕಾರಿ ಮುಖಾಂತರ ಸಮೀಕ್ಷೆ ಮಾಡಲು ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಉದ್ದೇಶ ಪೂರ್ವಕವಾಗಿ ಮರಳುಗಾರಿಕೆ ಆರಂಭಿಸಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ, ಕಳೆದ ಜಿಲ್ಲೆಯಲ್ಲಿ ಬಸವ ವಸತಿ ಯೋಜನೆ ಅಡಿಯಲ್ಲಿ 3,500 ಮನೆಗಳು ಮಂಜೂರಾಗಿದೆ. ಒಂದೂ  ಮನೆಗೆ ಅಡಿಪಾಯ ಹಾಕಿಲ್ಲ. ಈ ಬಾರಿ ಇನಷ್ಟು ಮನೆಗಳು ಮಂಜೂರಾಗಿವೆ. ಜಿಲ್ಲೆಯ ವಿವಿಧ ಕಡೆಯಲ್ಲಿ ರಸ್ತೆ, ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿಲ್ಲ. ಸ್ವತಃ ಮುಖ್ಯಮಂತ್ರಿ ಬಂದು ಜಿಲ್ಲೆಯ ಪ್ರಗತಿ ಪರಿಶೀಲನೆ ಮಾಡಿ, ಮರಳುಗಾರಿಕೆ ಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಿದರು ಜಿಲ್ಲಾಡಳಿತ ಯಾವುದೇ ಆಸಕ್ತಿ ವಹಿಸುತ್ತಿಲ್ಲ. ಬಡವರ ಮನೆ ಮರಳು ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎನ್ನುವುದಾಗಿ  ಸಚಿವೆ  ತಿಳಿಸಲಾಗಿದೆ ಎಂದರು

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !