ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದಲ್ಲಿ ಪ್ರಚಾರಕ್ಕೆ ಸೂಚನೆ ಬಂದಿಲ್ಲ: ಸುಮಲತಾ

Published 19 ಏಪ್ರಿಲ್ 2024, 13:58 IST
Last Updated 19 ಏಪ್ರಿಲ್ 2024, 13:58 IST
ಅಕ್ಷರ ಗಾತ್ರ

ಉಡುಪಿ: ‘ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರ ಪರ ಪ್ರಚಾರ ಮಾಡುವಂತೆ ಇದುವರೆಗೂ ಸೂಚನೆ ಬಂದಿಲ್ಲ. ಬಂದರೆ, ಖಂಡಿತ ಎನ್‌ಡಿಎ ಪರ ಪ್ರಚಾರಕ್ಕೆ ಹೋಗುತ್ತೇನೆ’ ಎಂದು ಮಂಡ್ಯದ ಸಂಸದೆ ಸುಮಲತಾ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂಡ್ಯದಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದು ಅನಗತ್ಯವಾಗಿ ಚರ್ಚೆ ಮಾಡಲಾಗುತ್ತಿದೆ. ಯಾವ ಅಭ್ಯರ್ಥಿಯ ಪರ ಪ್ರಚಾರ ಮಾಡಬೇಕು ಎಂದು ಪಕ್ಷ ಸೂಚಿಸುತ್ತದೆಯೋ ಅವರ ಪರ ಪ್ರಚಾರ ಮಾಡುತ್ತೇನೆ’ ಎಂದರು.

‘ನಟ ದರ್ಶನ್‌ಗೆ ನಿರ್ದಿಷ್ಟ ಪಕ್ಷದ ಪರವಾಗಿ ಪ್ರಚಾರ ಮಾಡುವಂತೆ ಎಂದೂ ಹೇಳಿಲ್ಲ, ಹೇಳುವುದೂ ಇಲ್ಲ. ದರ್ಶನ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಹೊಸದಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌, ರೈತ ಸಂಘ, ಬಿಜೆಪಿ ಪರ ಪ್ರಚಾರ ಮಾಡಿದ್ದರು. ಮಂಡ್ಯದಲ್ಲಿ ನನ್ನ ಪರವಾಗಿಯೂ ಪ್ರಚಾರ ಮಾಡಲು ಕರೆದಿರಲಿಲ್ಲ. ಸ್ವಇಚ್ಛೆಯಿಂದ ದರ್ಶನ್ ಹಾಗೂ ಯಶ್‌ ಪ್ರಚಾರಕ್ಕೆ ಬಂದಿದ್ದರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT