ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ವಾಟರ್ ಮೆಟ್ರೊಗೆ ಅನುಮೋದನೆ

Published 19 ಜನವರಿ 2024, 4:20 IST
Last Updated 19 ಜನವರಿ 2024, 4:20 IST
ಅಕ್ಷರ ಗಾತ್ರ

ಮಂಗಳೂರು: ಕೊಚ್ಚಿ ಮಾದರಿಯಲ್ಲಿ ಮಂಗಳೂರಿನಲ್ಲಿ ಅಂದಾಜು ₹ 1,600 ಕೋಟಿ ವೆಚ್ಚದಲ್ಲಿ ವಾಟರ್ ಮೆಟ್ರೊ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ.

ಈಚೆಗೆ ಬೆಂಗಳೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಜಲ ಸಾರಿಗೆ ಮಂಡಳಿ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

ತ್ವರಿತವಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರಂಭಿಕ ಹಂತದಲ್ಲಿ ಬೆಂಗ್ರೆಯಿಂದ ಮಂಗಳೂರು, ಉಳ್ಳಾಲದಿಂದ ಮಂಗಳೂರು ಕಡೆಗೆ ಸುಸಜ್ಜಿತ ಜಲ ಸಾರಿಗೆ ವ್ಯವಸ್ಥೆಗೊಳಿಸಲು ಚರ್ಚಿಸಲಾಯಿತು. ಈ ಬಗ್ಗೆ ಸಾಧ್ಯತಾ ವರದಿ ಸಿದ್ಧಪಡಿಸಿದ ನಂತರ ಪಿಪಿಪಿ ಅಥವಾ ಇನ್ನಾವುದೇ ರೀತಿಯಲ್ಲಿ ಅನುಷ್ಠಾನಗೊಳಿಸಲು ಮಂ ಡಳಿ ತೀರ್ಮಾನ ಕೈಗೊಳ್ಳಲಿದೆ.

ಈ ಯೋಜನೆ ಅಂತರ ರಾಷ್ಟ್ರೀಯ ಹಡಗುಗಳು ನಿಲುಗಡೆ ತಾಣ ನಿರ್ಮಾಣವೂ ಒಳಗೊಂಡಿದೆ. ಇದರಿಂದ ಬಂದರು ಆಧಾರಿತ ವಾಣಿಜ್ಯ ಚಟುವಟಿಕೆಗಳಿಗೆ ವೇಗ ಸಿಗಲಿದೆ ಎಂದು ಮೂಲಗಳು ತಿಳಿಸಿವೆ. 

ಮಂಗಳೂರಿನಲ್ಲಿ ಜಲ ಸಾರಿಗೆ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ಸರ್ಕಾರಿ ಸ್ವಾಮ್ಯದ ಸೆಂಟರ್ ಆಫ್ ಎಕ್ಸಲೆನ್ಸ್‌ ಫಾರ್ ಮೆರಿಟೈಮ್ ಸ್ಟಡೀಸ್ (ಸಿಇಎಂಎಸ್) ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇನ್ನು ಮೂರು ತಿಂಗಳೊಳಗೆ ಈ ತರಬೇತಿ ಕೇಂದ್ರ ಕಾರ್ಯಾರಂಭ ಮಾಡಲಿದೆ. ಪರಿಸರ ಸ್ನೇಹಿ ಜಲ ಸಾರಿಗೆ ಬ‌ಗ್ಗೆ ಕೇಂದ್ರವು ಜಾಗೃತಿ ಮೂಡಿಸಲಿದೆ. ಈ ಕೇಂದ್ರವನ್ನು ಶೀಘ್ರ ಪ್ರಾರಂಭಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮಂಡಳಿಯ ಉಪಾಧ್ಯಕ್ಷರಾಗಿರುವ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ, ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT