ಗುರುವಾರ , ಜೂನ್ 24, 2021
27 °C

ಯಡಿಯೂರಪ್ಪ ಹೇಳಿಕೆಯಲ್ಲಿ ತಪ್ಪಿಲ್ಲ: ಅನರ್ಹರಿಂದಲೇ ಸರ್ಕಾರ ಎಂದ ಶೋಭಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಅನರ್ಹ ಶಾಸಕರು ರಾಜೀನಾಮೆ ನೀಡಿದ ಕಾರಣಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡರು.

ಸೋಮವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅನರ್ಹ ಶಾಸಕರು ಯಾರ ಬಂಧನದಲ್ಲಿ ಇಲ್ಲ. ಉಪ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಅವರೇ ನಿರ್ಧರಿಸಲಿದ್ದಾರೆ ಎಂದರು.

ಅನರ್ಹ ಶಾಸಕರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿದೆ. ಬಿಜೆಪಿಗೆ ಬರುವ ವಿಶ್ವಾಸವಿದ್ದು, ಪಕ್ಷದ ಚಿಹ್ನೆಯಿಂದಲೇ ಸ್ಪರ್ಧಿಸುವ ವಿಶ್ವಾಸವಿದೆ. ಬರದಿದ್ದರೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಅವರು ಸ್ವತಂತ್ರರು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ವಿರೋಧ ಪಕ್ಷದ ನಾಯಕರಾಗಿದ್ದು ಬ್ಲಾಕ್‌ಮೇಲ್‌ ರಾಜಕಾರಣದ ಮೂಲಕ. ಅವರಿಂದ ಯಾವ ಪಾಠ ಕಲಿಯುವ ಅವಶ್ಯಕತೆ ಇಲ್ಲ ಕುಟುಕಿದರು.

ಸಿ.ಎಚ್‌.ವಿಜಯಶಂಕರ್ ಸಜ್ಜನ ನಾಯಕರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಚುನಾವಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು