ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲ್ಲಿಕಟ್ಟೆ ಜ್ಞಾನಗಂಗಾ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕ ಉದ್ಘಾಟನೆ

Published 19 ಜುಲೈ 2023, 4:56 IST
Last Updated 19 ಜುಲೈ 2023, 4:56 IST
ಅಕ್ಷರ ಗಾತ್ರ

ಶಿರ್ವ: ಮೂಡುಬೆಳ್ಳೆಯ ನೆಲ್ಲಿಕಟ್ಟೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ ನಡೆಯಿತು.

ಬ್ರಹ್ಮಾವರದ ಉದ್ಯಮಿ ದಿನೇಶ್ ಭಟ್ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ನಗರಸಭೆಯ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ‘ಸೃಷ್ಟಿಯಲ್ಲಿ ಬದುಕುವ ಪ್ರತಿಯೊಂದು ಜೀವಿಗೂ ತಮ್ಮ ಜವಾಬ್ದಾರಿಯ ಅರಿವಿರಬೇಕು. ಮಾನವ ಜನ್ಮ ಶ್ರೇಷ್ಠವಾದದ್ದು, ಇಂದಿನ ಯುವ ಪೀಳಿಗೆಯಲ್ಲಿ ಸಂಸ್ಕಾರದ ಕೊರತೆಯಿದೆ. ಸಂಸ್ಕಾರದ ಪಾಠ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಹೇಳಿ ಕೊಡಬೇಕು’ ಎಂದರು.

ಸಂಸ್ಥೆಯ ಸ್ಥಾಪಕ ಅಧ್ಯಕ್ಷ, ವಕೀಲ ಗೋಪಿಕೃಷ್ಣ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಎನ್.ಎಸ್.ಎಸ್ ವಿದ್ಯಾರ್ಥಿಗಳು ಪಾಠದ ಜತೆಗೆ ತಮ್ಮನ್ನು ಸೇವೆಯಲ್ಲಿ ತೊಡಗಿಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು’ ಎಂದರು.

ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಭಾಸ್ಕರ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಯು.ಎಲ್.ಭಟ್ ಸ್ವಾಗತಿಸಿದರು. ವಂದನ ಕಾರ್ಯಕ್ರಮ ನಿರೂಪಿಸಿದರು. ಅನನ್ಯ ಬಲ್ಲಾಳ್ ವಂದಿಸಿದರು. ಎನ್.ಎಸ್.ಎಸ್ ಘಟಕದ ನಾಯಕ ವಿನೀತ್, ನಾಯಕಿ ಸಂಜನಾ ವೇದಿಕೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT