ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಯೂರು ಶ್ರೀಗಳ ಷಷ್ಠ್ಯಬ್ದ: ಜ್ಞಾನವಾಹಿನಿ ಕಾರ್ಯಕ್ರಮ 9ರಂದು

Last Updated 5 ಮಾರ್ಚ್ 2021, 15:34 IST
ಅಕ್ಷರ ಗಾತ್ರ

ಉಡುಪಿ: ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿಯ ಷಷ್ಠ್ಯಬ್ದ ಸಮಿತಿ ಆಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದು ಸಮಿತಿಯ ಉಪಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ನಡೆಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಿತಿಯ ಗೌರವಾಧ್ಯಕ್ಷರನ್ನಾಗಿ ಉದ್ಯಮಿ ಜಿ.ಶಂಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಾಧ್ಯಕ್ಷರನ್ನಾಗಿ ಸುರೇಶ್ ಶೆಟ್ಟಿ ಗುರ್ಮೆ, ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆ.ಪ್ರಭಾಕರ ಶೆಟ್ಟಿ ಕಬ್ಯಾಡಿ, ಕೋಶಾಧಿಕಾರಿಯಾಗಿ ಅಮಿತಾ ಗಿರೀಶ್‌ ಜತೆ ಕಾರ್ಯದರ್ಶಿಯಾಗಿ ಚಂದ್ರಿಕಾ, ಯಶೋಧಾ ಕೇಶವ್, ಸಂಘಟನಾ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಮೈಂದನ್ ಬೈಲಕೆರೆ ಅವರನ್ನು ಆಯ್ಕೆಮಾಡಲಾಗಿದೆ ಎಂದರು.

ಸ್ವಾಮೀಜಿಯ ಷಷ್ಠ್ಯಬ್ದ ಅಂಗವಾಗಿ ಜ್ಞಾನ ವಾಹಿನಿ ಹೆಸರಿನಲ್ಲಿ 60 ಮನೆಗಳಲ್ಲಿ ಮನೆ ಭಜನೆ, ಸತ್ಸಂಗ, ಹನುಮಾನ್ ಚಾಲೀಸ ಪಠಣ, ಮನೆಗೊಂದು ಗಂಧದ ಗಿಡ, ಅಂಗನವಾಡಿಗಳಿಗೆ ಮೂಲಸೌಕರ್ಯ, ಜನಜಾಗೃತಿ ಮಾಹಿತಿ ಶಿಬಿರ, ತುಳುಲಿಪಿ ಬರಹ ಕಾರ್ಯಾಗಾರ, ಸಾಧಕರಿಗೆ ಗೌರವ, ಗ್ರಾಮೀಣ ಕ್ರೀಡಾಕೂಟ, ಭಜನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಾರ್ಚ್ 9ರಂದು ಮಧ್ಯಾಹ್ನ 2ಗಂಟೆಗೆ ಪರ್ಕಳದ ಸುರಕ್ಷಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀಗಳು ಚಾಲನೆ ನೀಡಲಿದ್ದಾರೆ. ಇದೇವೇಳೆ ಪದಪ್ರದಾನ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಮಿತಿಯ ಪ್ರಭಾಕರ ಶೆಟ್ಟಿ ಕಬ್ಯಾಡಿ, ಅಮಿತಾ ಗಿರೀಶ್, ಚಂದ್ರಕಾ ಪ್ರಕಾಶ್, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT