ಗುರುವಾರ , ಅಕ್ಟೋಬರ್ 22, 2020
21 °C

ಉಡುಪಿ: 54 ನಿಷೇಧಿತ ಎಂಡಿಎಂಎ ಮಾತ್ರೆ ವಶಕ್ಕೆ, ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲದ ಆರ್‌ಟಿಒ ಕಚೇರಿ ರಸ್ತೆಯ ಎಂಡ್‌ ಪಾಯಿಂಟ್ ಬಳಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬ್ರಹ್ಮಾವರದ ಮಹಮ್ಮದ್ ಫಜಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 4.62 ಲಕ್ಷ ಮೌಲ್ಯದ 54 ಎಂಡಿಎಂಎ ಮಾತ್ರೆಗಳು, 30 ಗ್ರಾಂ ಬ್ರೌನ್‌ ಶುಗರ್, 2  ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ.  ಆರೋಪಿಯು ಮಣಿಪಾಲದ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡಲು ಬಂದಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅ.4ರಂದು ಕೂಡ ಮಣಿಪಾಲದ ಶೀಂಬ್ರಾ ಸೇತುವೆ ಬಳಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ₹ 14.94 ಲಕ್ಷ ಮೌಲ್ಯದ 498 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು