ಮಂಗಳವಾರ, ಆಗಸ್ಟ್ 4, 2020
26 °C
ಕುಂದಾಪುರದಲ್ಲಿ ಹೆಚ್ಚು; 1,841 ಗುಣಮುಖರಾಗಿ ಬಿಡುಗಡೆ

ಉಡುಪಿ: ಜಿಲ್ಲೆಯಲ್ಲಿ 160 ಮಂದಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದ್ದು ಗುರುವಾರ 160 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 87, ಕುಂದಾಪುರದ 60, ಕಾರ್ಕಳದ 13 ಸೋಂಕು ಪತ್ತೆಯಾಗಿದೆ.

ಮುಂಬೈನಿಂದ ಬಂದಿದ್ದ 6 ಮಂದಿಯಲ್ಲಿ, ಬೆಂಗಳೂರು ಪ್ರಯಾಣ ಹಿನ್ನೆಲೆಯ ಇಬ್ಬರು, ಪುಣೆ, ಮಂಗಳೂರು ಪ್ರಯಾಣ ಹಿನ್ನೆಲೆಯ ಇಬ್ಬರಲ್ಲಿ ಹಾಗೂ ಶೀತಜ್ವರ ಲಕ್ಷಣಗಳಿದ್ದ 42, ತೀವ್ರ ಉಸಿರಾಟದ ಸಮಸ್ಯೆ ಇದ್ದ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರಲ್ಲಿ 87 ಪುರುಷರು, 59 ಮಹಿಳೆಯರು 14 ಮಕ್ಕಳು ಇದ್ದಾರೆ. ಅಗತ್ಯವಿದ್ದವರಿಗೆ ಕೋವಿಡ್‌ ಆಸ್ಪತ್ರೆಗಳಲ್ಲಿ, ರೋಗದ ಲಕ್ಷಣಗಳಿಲ್ಲದ 448 ಸೋಂಕಿತರನ್ನು ಹೋಂ ಐಸೊಲೇಷನ್‌ನಲ್ಲಿರಿಸಲಾಗಿದೆ.

622 ಮಾದರಿ ಸಂಗ್ರಹ: ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 622 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗುರುವಾರ 276 ವರದಿಗಳು ನೆಗೆಟಿವ್ ಬಂದಿದ್ದು, 160 ಪಾಸಿಟಿವ್ ಬಂದಿವೆ. 653 ವರದಿಗಳು ಬರುವುದು ಬಾಕಿ ಇದೆ. 

ಸೋಂಕಿನ ಲಕ್ಷಣಗಳು ಕಂಡುಬಂದ 45 ಮಂದಿಗೆ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ 65 ಸೇರಿ ಜಿಲ್ಲೆಯಲ್ಲಿ ಇದುವರೆಗೂ 1,841 ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 994 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಸಂಖ್ಯೆ 2,846ಕ್ಕೇರಿಕೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು