ಮಂಗಳವಾರ, ಏಪ್ರಿಲ್ 7, 2020
19 °C
ಮಣಿಪಾಲದ ಕೆಎಂಸಿ ಹೊರರೋಗಿ ವಿಭಾಗದ ಸಮಯ ಬದಲಾವಣೆ

ಕೋವಿಡ್‌–19 ಭೀತಿ: ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಒಪಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಉಡುಪಿ: ಕೋವಿಡ್‌–19 ಹರಡುವಿಕೆ ತಡೆಯಲು ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯ ಎಲ್ಲ ಹೊರ ರೋಗಿ ವಿಭಾಗಗಳು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ತೆರೆದಿರಲಿವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಮಾತ್ರ ಸಾರ್ವಜನಿಕರು ಆಸ್ಪತ್ರೆಗೆ ಭೇಟಿ ನೀಡಬೇಕು. ಎಲ್ಲ ಪೂರ್ವ ನಿಯೋಜಿತ ಭೇಟಿಗಳನ್ನು ಮುಂದೂಡಬೇಕು. ಒಳ ರೋಗಿಯ ಜತೆಗೆ ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಉಳಿಯಬಹುದು. ತೀವ್ರ ನಿಗಾ ಘಟಕ ಹಾಗೂ ಶಸ್ತ್ರಚಿಕಿತ್ಸೆಯ ನಂತರದ ಐಸಿಯುಗಳಿಗೆ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಇರಲಿವೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು