ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್‌ ಸೂರ್ಯಾಸ್ತ ಕಾರ್ಯಾಚರಣೆ: 45 ಲೀಟರ್ ಅಕ್ರಮ ಮದ್ಯ ಪತ್ತೆ

Last Updated 19 ಮಾರ್ಚ್ 2023, 16:16 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ಶನಿವಾರ ರಾತ್ರಿ 8 ರಿಂದ 11ರವರೆಗೆ ನಡೆಸಿದ ಆಪರೋಷನ್ ಸೂರ್ಯಾಸ್ತ ವಿಶೇಷ ಕಾರ್ಯಾಚರಣೆ ನಡೆಯಿತು.

ಕಾರ್ಯಾಚಾರಣೆಯ ಭಾಗವಾಗಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್‌ ತೆರೆದು ವಾಹನಗಳನ್ನು ಕೂಲಂಕಷವಾಗಿ ತಪಾಸಣೆ ಮಾಡಲಾಯಿತು. ಈ ಸಂದರ್ಭ 45 ಲೀಟರ್ ಅಕ್ರಮ ಮದ್ಯ ಪತ್ತೆಯಾಗಿದ್ದು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನಿಷೇದಿತ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಯಿತು. ಇ-ಸಿಗರೇಟ್ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ ಗಾಂಜಾ ಹಾಗೂ ಇ ಸಿಗರೇಟ್‌ ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ.

ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ವಿರುದ್ಧ 32 ಪ್ರಕರಣ ದಾಖಲಿಸಲಾಗಿದೆ. ಕ್ರಮ ಬದ್ಧ ನಂಬರ್ ಪ್ಲೇಟ್ ಹೊಂದಿರದ ಹಾಗೂ ನಕಲಿ ನಂಬರ್ ಪ್ಲೇಟ್ ಹಾಕಿದ್ದ 29 ವಾಹನಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. 258 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ 1,30 ಲಕ್ಷ ದಂಡ ಸಂಗ್ರಹಿಸಲಾಗಿದೆ.

44 ನಿಷೇಧಿತ ಪ್ರದೇಶಗಳಲ್ಲಿ ತಂಬಾಕು ಹಾಗೂ ಉತ್ಪನ್ನಗಳನ್ನು ಮಾರಾಟ ಮಾಡಿದ್ದಕ್ಕೆ 44 ಕೋಟ್ಪಾ ಪ್ರಕರಣ ದಾಖಲಿಸಲಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮದ್ಯಪಾನ ಮಾಡುತ್ತಿದ್ದ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 65 ಮಂದಿ ರೌಡಿ ಶೀಟರ್‌ಗಳನ್ನು ತಪಾಸಣೆಗೊಳಿಸಿ ಕಾರ್ಯಚಟುವಟಿಕೆಗಳ ಬಗ್ಗೆ ನಿಗಾವಹಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸಲು, ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವತಿಯಿಂದ ಆಪರೇಷನ್ ಸೂರ್ಯಾಸ್ತ ವಿಶೇಷ ಕಾರ್ಯಾಚರಣೆ ನಡೆಸಲಾಯಿತು ಎಂದು ಎಸ್‌ಪಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT