ಸೋಮವಾರ, ನವೆಂಬರ್ 29, 2021
20 °C

ಪದ್ಮ ವಿಭೂಷಣ ಪ್ರಶಸ್ತಿ: ಪೇಜಾವರ ಶ್ರೀಗಳಿಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗೆ ಕೇಂದ್ರ ಸರ್ಕಾರ ಹಿಂದೆ, ಘೋಷಿಸಿದ್ದ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನ.8ರಂದು ದೆಹಲಿಯಲ್ಲಿ ನಡೆಯಲಿದ್ದು, ಪ್ರಶಸ್ತಿ ಸ್ವೀಕರಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ದೂರವಾಣಿ ಮೂಲಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ವಿಶ್ವೇಶತೀರ್ಥ ಶ್ರೀಗಳು ನೀಡಿದ ಕೊಡುಗೆ ಆಧರಿಸಿ ಕೇಂದ್ರ ಸರ್ಕಾರ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿತ್ತು. ಕೋವಿಡ್‌ನಿಂದಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ.

ಸಚಿವ ಗೋವಿಂದ ಕಾರಜೋಳ ಅವರು ಟ್ವೀಟ್‌ ಮೂಲಕ ಪೇಜಾವರ ಶ್ರೀಗಳಿಗೆ ಪದ್ಮ ವಿಭೂಷಣ ಪ್ರಶಸ್ತಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು