ಪಡುಬಿದ್ರಿ: ನಂದಿಕೂರು ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ, ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನಂದಿಕೂರು ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಉಡುಪಿ ತಾಲ್ಲೂಕು ಮಟ್ಟದ ಬಾಲಕ–ಬಾಲಕಿಯರ ವಾಲಿಬಾಲ್ ಟೂರ್ನಿ ಮಂಗಳವಾರ ನಡೆಯಿತು.
ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಿದ್ದವು. ಬಾಲಕರ ವಿಭಾಗ: ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆ (ಪ್ರಥಮ), ಮಲ್ಪೆ ನಾರಾಯಣಗುರು ಶಾಲೆ ತಂಡ (ದ್ವಿತೀಯ) ಸ್ಥಾನ ಪಡೆಯಿತು. ಬಾಲಕಿಯರ ವಿಭಾಗ: ಶಂಕರಪುರ ಸೇಂಟ್ ಜೋನ್ಸ್ ಶಾಲೆ (ಪ್ರಥಮ), ಕಾಜಾರಗುತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ) ಬಹುಮಾನ ಪಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಮ್ಮ ಬಹುಮಾನ ವಿತರಿಸಿದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ದಾನಿ ಉಮಾ ಕಿಟ್ಟಣ್ಣ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನಂದಿಕೂರು ಎಜುಕೇಷನ್ ಟ್ರಸ್ಟ್ ಕಾರ್ಯಾಧ್ಯಕ್ಷ ಲಕ್ಷ್ಮಣ್ ಎಲ್ ಶೆಟ್ಟಿವಾಲ್ ಅಧ್ಯಕ್ಷತೆ ವಹಿಸಿದ್ದರು.
ನಂದಿಕೂರು ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಅನಿಲ್ ಶೆಟ್ಟಿ ಏಳಿಂಜೆ, ಯುವಜನ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಅಧಿಕಾರಿ ರಿತೇಶ್‌ಕುಮಾರ್ ಶೆಟ್ಟಿ ಸೂಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ರಾಮಕೃಷ್ಣ ಭಟ್, ವಸಂತ ಶೆಟ್ಟಿ, ಆಡಳಿತಾಧಿಕಾರಿ ಸಾಯಿನಾಥ್ ಎಂ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಡ್ವೆ ಮಾಗಂದಡಿ, ಜೊತೆ ಕಾರ್ಯದರ್ಶಿ ನಾಗರಾಜ ರಾವ್, ನಂದಿಕೂರು ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಉದಯ ರೈ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಮಹೇಶ್ ಶೆಟ್ಟಿ ಇದ್ದರು.
ಮುಖ್ಯ ಶಿಕ್ಷಕಿ ರಮಣಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ತಾಲ್ಲೂಕು ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ವೇತಾ ದಾನಿಗಳ ಪಟ್ಟಿ ಓದಿದರು. ಶಿಕ್ಷಕಿ ಜಯಲಕ್ಷ್ಮಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರೇಮಾ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.