ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದಾನಿ ಸಿಎಸ್‌ಆರ್ ಅನುದಾನ: ನವೀಕೃತ ಶೌಚಾಲಯ, ರುದ್ರಭೂಮಿ ಉದ್ಘಾಟನೆ

Published 13 ನವೆಂಬರ್ 2023, 13:17 IST
Last Updated 13 ನವೆಂಬರ್ 2023, 13:17 IST
ಅಕ್ಷರ ಗಾತ್ರ

ಪಡುಬಿದ್ರಿ: ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್, ಉಡುಪಿ ಟಿಪಿಪಿ ಸಂಸ್ಥೆ ಪಡುಬಿದ್ರಿ ಗ್ರಾಮ ಪಂಚಾಯಿತಿ ವಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ, ರುದ್ರಭೂಮಿ ನವೀಕರಣವನ್ನು ಸಿಎಸ್‌ಆರ್ ಯೋಜನೆಯಡಿ ₹14 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದು, ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಯಿತು.

ಪಡುಬಿದ್ರಿ ಪೇಟೆಯಲ್ಲಿ ಇರುವ ಸಾರ್ವಜನಿಕ ಶೌಚಾಲಯ ದು:ಸ್ಥಿತಿಯಿಂದ ಸಾರ್ವಜನಿಕರ ಉಪಯೋಗಕ್ಕೆ ಕಷ್ಟಕರವಾಗಿತ್ತು. ಈ ಬಗ್ಗೆ ಗ್ರಾಮ ಪಂಚಾಯಿತಿ ಸಾರ್ವಜನಿಕ ಶೌಚಾಲಯ ನವೀಕರಣ ಕಾಮಗಾರಿಯನ್ನು ಪಂಚಾಯಿತಿ ಕ್ರಿಯಾಯೋಜನೆಯಲ್ಲಿ ಅಳವಡಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅದಾನಿ ಸಂಸ್ಥೆಗೆ ಮನವಿ ಸಲ್ಲಿಸಿತ್ತು. ಕಾಮಗಾರಿಯನ್ನು ಕೈಗೆತ್ತಿಕೊಂಡ ಅದಾನಿ ಸಂಸ್ಥೆ ₹8 ಲಕ್ಷ ವೆಚ್ಚದಲ್ಲಿ ಶೌಚಾಲಯ ನವೀಕರಿಸಿದೆ.

ಕಂಚಿನಡ್ಕದಲ್ಲಿರುವ ರುದ್ರಭೂಮಿಯಲ್ಲೂ ಅಭಿವೃದ್ಧಿ ಕೆಲಸಗಳ ಅವಶ್ಯಕತೆ ಗುರುತಿಸಿ ಗ್ರಾಮ ಪಂಚಾಯಿತಿ ರುದ್ರಭೂಮಿ ನವೀಕರಿಸಲು ಸಲ್ಲಿಸಿದ ಮನವಿ ಮೇರೆಗೆ ₹6 ಲಕ್ಷ ವೆಚ್ಚದಲ್ಲಿ ನವೀಕರಣ ಕಾಮಗಾರಿಗಳನ್ನು ಅದಾನಿ ಸಂಸ್ಥೆಯ ಸಿಎಸ್‌ಆರ್ ಯೋಜನೆ ಕಾರ್ಯರೂಪಕ್ಕೆ ತರುವ ಅಂಗ ಸಂಸ್ಥೆ ಅದಾನಿ ಫೌಂಡೇಷನ್‌ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು.

ಎರಡೂ ಅಭಿವೃದ್ಧಿ ಕೆಲಸಗಳನ್ನು ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅದಾನಿ ಫೌಂಡೇಷನ್ ಅಡಿಯಲ್ಲಿ ಉಡುಪಿ ಉಷ್ಣ ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ 7 ಗ್ರಾಮ ಪಂಚಾಯಿತಿಗಳಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್‌ಆರ್ ಯೋಜನೆಯಲ್ಲಿ ಪ್ರತ್ಯೇಕ ಅನುದಾನ ಮೀಸಲಿಟ್ಟಿದ್ದು, ಆಯಾ ಗ್ರಾಮ ಪಂಚಾಯಿತಿ ನೀಡುವ ಕ್ರಿಯಾಯೋಜನೆ ಮೇರೆಗೆ ಅಭಿವೃದ್ಧಿ ಹೊಂದಬೇಕಾದ ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.

ಸ್ಥಾವರವು ಅದಾನಿ ಸಮೂಹದ ತೆಕ್ಕೆಗೆ ಬಂದ ಮೇಲೆ ಪಡುಬಿದ್ರಿ ವ್ಯಾಪ್ತಿಯಲ್ಲಿ ₹1.55 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಅದಾನಿ ಸಂಸ್ಥೆಯು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಒಂದು ವರದಾನವಾಗಿದೆ ಎಂದು ಧನ್ಯವಾದ ಸಲ್ಲಿಸಿದರು. ಉಪಾಧ್ಯಕ್ಷ ಹೇಮಚಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಸದಸ್ಯರಾದ ನಿಯಾಝ್, ರಮೀಝ್ ಹುಸೈನ್, ಅದಾನಿ ಸಂಸ್ಥೆಯ ಏಜಿಎಂ ರವಿ ಆರ್. ಜೇರೆ, ಅದಾನಿ ಫೌಂಡೇಷನ್‌ ಅನುದೀಪ್ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT