ಪಡುಬಿದ್ರಿ: ಎಸ್ಐಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಕಾಂಗ್ರೆಸ್ ಪಡುಬಿದ್ರಿ ಗ್ರಾಮೀಣ ಸಮಿತಿಯ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್ನ ಅಧ್ಯಕ್ಷ ರಮೀಝ್ ಹುಸೇನ್ ಹಾಗೂ ಪದಾಧಿಕಾರಿಗಳ ಪದಾಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಸ್ಐಆರ್ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ಒಂದು ತಿಂಗಳು ಎಸ್ಐಆರ್ ಚಟುವಟಿಕೆಗಳ ಬಗ್ಗೆ ಮನೆ–ಮನೆಗೆ ತೆರಳಿ ಜಾಗೃತಿ ಮೂಡಿಸಬೇಕು. ಕುಟುಂಬದ ಸದಸ್ಯರ ಮತದಾರರ ಗುರುತಿನ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಮತದಾನದ ಹಕ್ಕು ಸಂರಕ್ಷಣೆಗಾಗಿ ಆಂದೋಲನದ ಮೂಲಕ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವುದು ಮುಖ್ಯವಾಗಿದ್ದು, ಸಾರ್ವಜನಿಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು. ದೇಶದ ಇಂದಿನ ಪರಿಸ್ಥಿತಿ ಹದಗೆಟ್ಟಿದ್ದು, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದರು.

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷ ಜನರ ಬಳಿಗೆ ತಲುಪಿ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪಕ್ಷವನ್ನು ಬೂತ್ ಮಟ್ಟಕ್ಕೆ ತೆಗೆದುಕೊಂಡು ಹೋದರೆ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ. ಯಾವ ಪಕ್ಷ ನಮಗೆ ಅವಕಾಶ ನೀಡಿದೆಯೋ, ಅದನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ. ನಾಯಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಬಿಜೆಪಿಗೆ ಉಳಿವೇ ಇರುವುದಿಲ್ಲ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಎಂದರು.

ಗ್ರಾಮೀಣ ಘಟಕದ ಅಧ್ಯಕ್ಷ ಕರುಣಾಕರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಬ್ಲಾಕ್ ಸಮಿತಿಯ ವೈ.ಸುಕುಮಾರ್, ಕೆಪಿಸಿಸಿ ಸಂಯೋಜಕ ನವೀನ್ಚಂದ್ರ ಜೆ.ಶೆಟ್ಟಿ, ವಿಶ್ವಾಸ್ ಅಮೀನ್, ನವೀನ್ ಎನ್.ಶೆಟ್ಟಿ, ಗಣೇಶ್ ಕೋಟ್ಯಾನ್, ವಿವಿಧ ಬೂತ್ಗಳ ಅಧ್ಯಕ್ಷರಾದ ಕೃಷ್ಣ ಆಚಾರಿ ಪಾದೆಬೆಟ್ಟು, ಅಶ್ವತ್ಥ ಆಚಾರ್ಯ, ಅಬ್ದುಲ್ ಖಾದರ್, ಸುನಂದಾ ದೇವಾಡಿಗ, ಗಗನ್ ಕರ್ಕೇರಾ, ಎಂ.ಎಸ್. ಮನ್ಸೂರ್, ವಿಠಲ್ ಮಾಸ್ಟರ್, ಅಶ್ವಿನ್ ಎಂ. ಕೋಟ್ಯಾನ್, ಮುಹಮ್ಮದ್ ಸಿರಾಜ್, ಶಫಿ ಎಂ.ಎಸ್, ರಾಜೇಶ್ ಶೇರಿಗಾರ್, ಸದಾಶಿವ ಸಾಲ್ಯಾನ್, ಲಿಯಾಕತ್ ಮುನ್ನಾ, ವೈ.ಸುಧೀರ್ ಕುಮಾರ್, ಸುನೇತ್ರಾ ಪಿ.ಶೆಟ್ಟಿ, ಅಶೋಕ್ ಸಾಲ್ಯಾನ್, ಮುಹಮ್ಮದ್ ನಿಯಾಜ್ ಇದ್ದರು.

ಸುಧಾಕರ ಕೆ. ಸ್ವಾಗತಿಸಿದರು. ಸಂತೋಷ್ ಕುಮಾರ್ ವಂದಿಸಿದರು. ರಝಾಕ್ ಕಂಚಿನಡ್ಕ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-1383428525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.