ಪಡುಬಿದ್ರಿ: ‘ಆಹಾರ ಪದ್ಧತಿಗಳಲ್ಲಿನ ಬದಲಾವಣೆಗಳಿಂದ ದೇಹಕ್ಕೆ ಅಗತ್ಯವಾದ ಪೌಷ್ಟಿಕಾಂಶಗಳ ಕೊರತೆ ಉಂಟಾಗಿ, ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ’ ಎಂದು ಪಡುಬಿದ್ರಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ವೈ.ಎನ್. ಶೆಟ್ಟಿ ಹೇಳಿದರು.

ಇಲ್ಲಿನ ಬಂಟರ ಭವನದಲ್ಲಿ ಈಚೆಗೆ ಪಡುಬಿದ್ರಿ ಬಂಟರ ಸಂಘದ ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಜಂಟಿ ಸಹಭಾಗಿತ್ವದಲ್ಲಿ ಮುಕ್ಕ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಆ್ಯಂಡ್ ಡೆಂಟಲ್ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ವೈದ್ಯಕೀಯ ತಪಾಸಣೆ ಶಿಬಿರ, ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಥಳೀಯ ಆಹಾರ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸುವುದರ ಜತೆಗೆ ಅನೇಕ ಜೀವನ ಶೈಲಿ, ರೋಗಗಳಿಂದ ದೂರ ಉಳಿಯಲು ಸಹಾಯವಾಗುತ್ತದೆ. ಆದ್ದರಿಂದ, ಆಧುನಿಕ ಆಹಾರ ಪದ್ಧತಿಗಳ ನಡುವೆ ದೇಶೀಯ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು.

ಮುಕ್ಕ ಶ್ರೀನಿವಾಸ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡೇವಿಡ್ ರೋಸಾರಿಯೊ ಮಾತನಾಡಿ, ಜೀವನ ಪದ್ಧತಿಯಿಂದ ಯುವಜನರಲ್ಲಿ ನಾನಾ ರೀತಿಯ ಕಾಯಿಲೆಗಳು ಹೆಚ್ಚುತ್ತಿದ್ದು, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆಯಿದೆ. ರೋಗ ಉಲ್ಬಣಿಸುವ ಮೊದಲೇ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಆರೋಗ್ಯವಿಲ್ಲದಿದ್ದರೆ ಜೀವನ ವ್ಯರ್ಥ. ಅನಾರೋಗ್ಯ ಬರುವ ಮೊದಲೇ ಎಚ್ಚೆತ್ತುಕೊಳ್ಳುವ ಸಲುವಾಗಿ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.

ಶ್ರೀನಿವಾಸ ಆಸ್ಪತ್ರೆ ಮೂಳೆ ಚಿಕಿತ್ಸಾ ವಿಭಾಗ ಪ್ರಾಧ್ಯಾಪಕ ಡಾ. ಶಶಿರಾಜ್ ಶೆಟ್ಟಿ, ಡಾ. ಡೇವಿಡ್ ರೊಸಾರಿಯೊ ಅವರನ್ನು ಸನ್ಮಾನಿಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ, ಸಿರಿಮುಡಿ ದತ್ತಿನಿಧಿ ಸ್ಥಾಪಕ ಸಾಂತೂರು ಭಾಸ್ಕರ ಶೆಟ್ಟಿ, ಬಂಟರ ಸಂಘ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಖಜಾಂಚಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗ ಕೋಶಾಧಿಕಾರಿ ಲತಾ ಪಿ.ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ ಇದ್ದರು. ಮಹಿಳಾ ವಿಭಾಗ ಅಧ್ಯಕ್ಷೆ ಭಾರತಿ ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಸುಶ್ಮಿತಾ ಮಿಥುನ್ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-958167437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.