ಪಡುಬಿದ್ರಿ: ಇಲ್ಲಿನ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ₹3.49 ಲಕ್ಷ ಸಾಲ ಪಡೆದು ವಂಚಿಸಿರುವ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜೀವ್ ಕಲಾಯತಿನಲ್ಕುಜಿಯಿಲ್ ಕುಟ್ಟಪ್ಪನ್ ಎಂಬಾತ 2022ರ ಸೆಪ್ಟೆಂಬರ್ 21ರಂದು 103.25 ಗ್ರಾಂ ತೂಕದ ಚಿನ್ನಾಭರಣಗಳನ್ನು ಅಡವಿಟ್ಟು ₹3,49,000 ಸಾಲ ಪಡೆದಿದ್ದ. ಈತ ಇತರ ಬ್ಯಾಂಕ್ಗಳಲ್ಲಿಯೂ ನಕಲಿ ಆಭರಣ ಅಡವಿಟ್ಟು ಸಾಲ ಪಡೆದಿರುವ ಕುರಿತು ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಸಂಶಯಗೊಂಡು ಆತ ಅಡವಿಟ್ಟಿದ್ದ ಚಿನ್ನಾಭರಣಗಳ ಮರು ಪರಿಶೀಲನೆ ನಡೆಸಿದಾಗ ಅಡವಿಟ್ಟ ಆಭರಣಗಳು ನಕಲಿ ಎಂಬುದು ಬೆಳಕಿಗೆ ಬಂದಿದೆ. ಬ್ಯಾಂಕ್ನಲ್ಲಿ ತಕ್ಷಣ ಮರು ಪರಿಶೀಲನೆಗೆ ಅವಕಾಶವಿಲ್ಲದ ಕಾರಣ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರು ದಾಖಲಿಸಲಾಗಿದೆ ಎಂದು ಆಕ್ಸಿಸ್ ಬ್ಯಾಂಕ್ ಪಡುಬಿದ್ರಿ ಶಾಖೆಯ ಶಾಖಾ ಮುಖ್ಯಸ್ಥ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-257894507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.