‘ಸಿದ್ಧತೆ ಮಾಡಿಕೊಳ್ಳಲಾಗಿದೆ’
ಕಾಪು ತಾಲ್ಲೂಕಿನಲ್ಲಿ ಈವರೆಗೆ ನೀರಿನ ಸಮಸ್ಯೆ ತಲೆದೋರಿಲ್ಲ. ಗ್ರಾಮ ಪಂಚಾಯಿತಿ ಪಿಡಿಒ ಅವರೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ. ನೀರಿನ ಸಮಸ್ಯೆ ಎದುರಾದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅವರಿಗೆ ಜವಾಬ್ದಾರಿ ನೀಡಲಾಗಿದೆ. ಕೋಟೆ ಗ್ರಾಮದಲ್ಲಿ ಉಪ್ಪು ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಪರ್ಯಾಯವಾಗಿ ನೀರು ಪೂರೈಕೆಗೆ ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ಕಾಪು ತಾಲ್ಲೂಕು ಪಂಚಾಯಿತಿ ಇಒ ಜೇಮ್ಸ್ ಡಿಸಿಲ್ವ ತಿಳಿಸಿದರು.