ಪಡುಬಿದ್ರಿ: ಗುರುವಾರ ಮಧ್ಯಾಹ್ನದ ವೇಳೆ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು.

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇಲ್ಲ. ಹೀಗಾಗಿ, ರಸ್ತೆ ಮಧ್ಯಭಾಗದಲ್ಲೇ ನೀರು ಸಂಗ್ರಹವಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಈ ಬಗ್ಗೆ ಹಲವು ಬಾರಿ ಹೆದ್ದಾರಿ ಇಲಾಖೆಯ ಗಮನಕ್ಕೆ ತಂದರೂ ಸ್ಪಂದನೆ ದೊರಕಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತೀ ಮಳೆಗಾಲದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದೆ. ಪಡುಬಿದ್ರಿ, ಕಾಪು, ಎರ್ಮಾಳು, ಉಚ್ಚಿಲ ಹಾಗೂ ಹೆಜಮಾಡಿ ಪ್ರದೇಶಗಳಲ್ಲಿ ಹೆದ್ದಾರಿಯ ಮೇಲೆ ಮಳೆ ನೀರು ನಿಂತಿದ್ದು, ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲ ತಗ್ಗು ಪ್ರದೇಶಗಳಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆಯ ಕೊರತೆಯಿಂದ ನೀರು ಹೊರಹೋಗದೆ ರಸ್ತೆಯಲ್ಲೇ ಉಳಿಯುತ್ತಿದೆ. ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಹೆಚ್ಚಿನ ಕಷ್ಟ ಅನುಭವಿಸುತ್ತಿದ್ದು, ಈಗಾಗಲೇ ಹಲವು ಅಪಘಾತಗಳು ಸಂಭವಿಸಿ ಸಾವು-ನೋವುಗಳೂ ಉಂಟಾಗಿವೆ ಎಂದು ಸ್ಥಳೀಯರು ದೂರಿದ್ದಾರೆ.

ಮಳೆಗಾಲದಲ್ಲಿ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಇದ್ದು, ತಕ್ಷಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ನೀರು ಹರಿದು ಹೋಗುವ ವ್ಯವಸ್ಥೆ ಕಲ್ಪಿಸಿ ರಸ್ತೆ ಸುರಕ್ಷತೆ ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-985246738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.